Isaiah 37:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ವರ ದೇವರುಗಳು ಅವರನ್ನು ರಕ್ಷಿಸಿದರೋ? ಇಲ್ಲ! ನನ್ನ ಪೂರ್ವಿಕರು ಅವರನ್ನು ಸಂಪೂರ್ಣವಾಗಿ ನಾಶಮಾಡಿದರು. ಅವರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್‌ನಲ್ಲಿ ವಾಸವಾಗಿದ್ದ ಎದೆನಿನ ಜನರನ್ನೂ ನಾಶಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ತಂದೆತಾತಂದಿರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?
Kannada BSI Bible 2016
ನನ್ನ ಪಿತೃಗಳು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣ ಗಳನ್ನು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಏದೆನಿನ ಜನ ರನ್ನು ನಾಶಮಾಡುವದಕ್ಕೆ ಹೋದಾಗ ಜನಾಂಗಗಳ ದೇವರುಗಳು ಅವರನ್ನು ಬಿಡುಗಡೆ ಮಾಡಿದವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ತಂದೆತಾತಂದಿರು ಗೋಜಾನ್, ಖಾರಾನ್, ರೆಚೆಫ್, ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?
Kannada Bible (KNCL) BSI 2016
ನನ್ನ ತಂದೆ ತಾತಂದಿರು ಗೋಜಾನ್, ಹಾರನ್, ರೆಚೆಪ್ ಎಂಬ ನಗರಗಳ ಜನರನ್ನು ಮತ್ತು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನು ನಾಶಮಾಡಿದರು. ಆಗ ಅವರ ದೇವರುಗಳು ಅವರನ್ನು ರಕ್ಷಿಸಲಾಗಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಪಿತೃಗಳು ಹಾಳುಮಾಡಿದ ಗೋಜಾನ್, ಹಾರಾನ್, ರೆಜೆಫ್ ಮುಂತಾದ ದೇವರುಗಳು ಅವರನ್ನು ಬಿಡುಗಡೆ ಮಾಡಲಿಲ್ಲ. ತೆಲ್ ಅಸ್ಸಾರ್ ಎಂಬಲ್ಲಿದ್ದ ಏದೆನಿನ ಜನರನ್ನು ಈ ದೇವರುಗಳು ಅವರನ್ನು ರಕ್ಷಿಸಲು ಸಾಧ್ಯವಾಯಿತೇ?