Isaiah 37:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಿಜ್ಕೀಯನು ಆ ದೂತರ ಕೈಗಳಿಂದ ಪತ್ರಗಳನ್ನು ತೆಗೆದುಕೊಂಡು ಓದಿದನು. ಅನಂತರ ನೇರವಾಗಿ ಯೆಹೋವನ ಆಲಯಕ್ಕೆ ಹೋಗಿ ಆ ಪತ್ರವನ್ನು ಯೆಹೋವನ ಮುಂದಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟನು.
Kannada BSI Bible 2016
ಹಿಜ್ಕೀಯನು ಆ ಸೇವಕರ ಕೈಯಿಂದ ಪತ್ರವನ್ನು ತೆಗೆದುಕೊಂಡು ಅದನ್ನು ಓದಿದನು; ಹಿಜ್ಕೀಯನು ಕರ್ತನ ಆಲಯಕ್ಕೆ ಹೋಗಿ ಅದನ್ನು ಕರ್ತನ ಮುಂದೆ ತೆರೆದಿಟ್ಟು,
Kannada BSI JV (ಕನ್ನಡ ಸತ್ಯವೇದವು J.V. (BSI))
ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟು
Kannada Bible (KNCL) BSI 2016
ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ, ದೇವಾಲಯಕ್ಕೆ ಹೋಗಿ ಅದನ್ನು ಸರ್ವೇಶ್ವರ ಸ್ವಾಮಿಯ ಮುಂದೆ ತೆರೆದಿಟ್ಟು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಿಜ್ಕೀಯನು ಆ ದೂತರ ಕೈಯಿಂದ ಪತ್ರವನ್ನು ತೆಗೆದುಕೊಂಡು ಓದಿದನು, ಅನಂತರ ಯೆಹೋವ ದೇವರ ಆಲಯಕ್ಕೆ ಹೋಗಿ ಅದನ್ನು ಯೆಹೋವ ದೇವರ ಮುಂದೆ ತೆರೆದಿಟ್ಟನು.