Isaiah 37:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಿಜ್ಕೀಯನು ಅರಮನೆಯ ಅಡಳಿತಗಾರನಾದ ಎಲ್ಯಾಕೀಮನನ್ನು, ಕಾರ್ಯದರ್ಶಿಯಾದ ಶೆಬ್ನನನ್ನು ಯಾಜಕರ ಹಿರಿಯರೊಂದಿಗೆ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ಬಳಿಗೆ ಕಳುಹಿಸಿದನು. ಇವರು ತಮ್ಮ ಮನಸ್ಸಿನ ದುಗುಡವನ್ನು ಪ್ರದರ್ಶಿಸುವಂತೆ ಶೋಕವಸ್ತ್ರಗಳನ್ನು ಧರಿಸಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವರನ್ನು ಕರೆಯಿಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿ ಹೀಗೆ ಹೇಳಿರಿ” ಎಂದು ಆಜ್ಞಾಪಿಸಿದನು.
Kannada BSI Bible 2016
ಇದಲ್ಲದೇ ಅವನು ಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್‌, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವ ರನ್ನು ಕರೆಸಿ--ನೀವು ಗೋಣೀತಟ್ಟನ್ನು ಮುಚ್ಚಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ ಎಂದು ಹೇಳಿಕಳುಹಿ ಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ವೃದ್ಧಯಾಜಕರು ಇವರನ್ನು ಕರಿಸಿ - ನೀವು ಗೋಣೀತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿ ಹೀಗೆ ಹೇಳಿರಿ ಎಂದು ಆಜ್ಞಾಪಿಸಿದನು.
Kannada Bible (KNCL) BSI 2016
ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ: “ನೀವು ಗೋಣಿತಟ್ಟನ್ನು ಕಟ್ಟಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ಬಳಿಗೆ ಹೋಗಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅವನು ಅರಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನಾದ ಪ್ರವಾದಿ ಯೆಶಾಯನ ಬಳಿಗೆ ಹೋಗಿರಿ,” ಎಂದು ಹೇಳಿ ಕಳುಹಿಸಿದನು.