Isaiah 37:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಪಟ್ಟಣಗಳಲ್ಲಿದ್ದ ಜನರು ನಿಸ್ಸಹಾಯಕರಾದರು ಮತ್ತು ಬಲಹೀನರಾದರು. ಅವರು ಹೆದರಿ ಗಲಿಬಿಲಿಗೊಂಡಿದ್ದರು. ಅವರು ಹೊಲದ ಹುಲ್ಲಿನಂತೆಯೂ ಸಸಿಗಳಂತೆಯೂ ಕಡಿದುಹಾಕಲ್ಪಡಲಿದ್ದಾರೆ. ಅವರು ಮನೆಯ ಮೇಲೆ ಬೆಳೆಯುವ ಹುಲ್ಲಿನಂತಿದ್ದಾರೆ. ಅವು ಉದ್ದವಾಗಿ ಬೆಳೆಯುವ ಮೊದಲೇ ಸಾಯುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಆಶಾಭಂಗಪಟ್ಟು ಕಳವಳಗೊಂಡರು. ಅವರು ಹೊಲದ ಗಿಡಕ್ಕೂ, ಹಸಿರು ಹುಲ್ಲಿಗೂ, ಮಾಳಿಗೆಯ ಮೇಲಣ ಹುಲ್ಲಿಗೂ, ಹೊಡೆಯುವುದಕ್ಕಿಂತ ಮೊದಲೇ ಒಣಗಿ ಹೋದ ಪೈರಿಗೂ ಸಮಾನರಾದರು.
Kannada BSI Bible 2016
ಆದದರಿಂದ ಅವುಗಳ ನಿವಾಸಿ ಗಳು ಬಲವಿಲ್ಲದವರಾಗಿ ಆಶಾಭಂಗ ಪಟ್ಟು ಕಳವಳ ಗೊಂಡರು; ಅವರು ಹೊಲದ ಹುಲ್ಲಿನಂತೆಯೂ ಹಸಿರು ಎಲೆಯಂತೆಯೂ ಮಾಳಿಗೆಯ ಮೇಲಿನ ಹುಲ್ಲಿನಂತೆಯೂ ಹೊಡೆಯುವದಕ್ಕಿಂತ ಮೊದಲೇ ಬಾಡಿಹೋಗುವ ಪೈರಿನಂತೆಯೂ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಆಶಾಭಂಗಪಟ್ಟು ಕಳವಳಗೊಂಡರು; ಅವರು ಹೊಲದ ಕಾಯಿಪಲ್ಯಕ್ಕೂ ಎಳೆಗರಿಕೆಗೂ ಮಾಳಿಗೆಯ ಮೇಲಣ ಹುಲ್ಲಿಗೂ ಹೊಡೆಹಾಯುವದಕ್ಕಿಂತ ಮೊದಲೇ [ಒಣಗಿ ಹೋದ] ಪೈರಿಗೂ ಸಮಾನರಾದರು.
Kannada Bible (KNCL) BSI 2016
ಬಲವಿಲ್ಲದವರಾದರು ಆ ನಗರವಾಸಿಗಳು ನನ್ನ ನಿಮಿತ್ತವೆ, ಸಮಾನರಾದರು ಹೊಲದ ಸಸಿಗೆ, ಎಳೆಗರಿಕೆಗೆ, ಮಾಳಿಗೆ ಮೇಲಿನ ಹುಲ್ಲಿಗೆ. ಬೆಳೆಯುವುದಕ್ಕೆ ಮೊದಲೆ ತುತ್ತಾದರು ಬಿರುಗಾಳಿಯ ಹೊಡೆತಕ್ಕೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಅವುಗಳ ನಿವಾಸಿಗಳು ಬಲಹೀನರಾಗಿ ಹೆದರಿ ಆಶಾಭಂಗಹೊಂದಿ ನಾಚಿಕೆಪಟ್ಟರು. ಅವರು ಹೊಲದ ಹುಲ್ಲಿನಂತೆಯೂ, ಹಸಿರು ಸಸಿಗಳಂತೆಯೂ, ಮಾಳಿಗೆಯ ಮೇಲಿನ ಹುಲ್ಲಿನಂತೆಯೂ, ಬೆಳೆಯುವುದಕ್ಕಿಂತ ಮುಂಚೆಯೇ ಬಾಡಿಹೋಗುವ ಪೈರಿನಂತೆಯೂ ಅವರಿದ್ದಾರೆ.