Isaiah 37:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೌದು, ನೀನು ನನ್ನ ವಿಷಯದಲ್ಲಿ ಕೋಪಗೊಂಡಿರುವೆ. ಗರ್ವದಿಂದ ತುಂಬಿದ ನಿನ್ನ ಪರಿಹಾಸ್ಯದ ಮಾತುಗಳನ್ನು ನಾನು ಕೇಳಿದ್ದೇನೆ. ನಾನು ನಿನ್ನ ಮೂಗಿಗೆ ಕೊಕ್ಕೆ ಸಿಕ್ಕಿಸಿ, ನಿನ್ನ ಬಾಯಿಗೆ ಕಡಿವಾಣವನ್ನು ಹಾಕಿ, ನೀನು ಎಲ್ಲಿಂದ ಬಂದಿದ್ದೆಯೋ ಅಲ್ಲಿಗೆ ನಿನ್ನನ್ನು ಹಿಂತಿರುಗಿಸುತ್ತೇನೆ.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ನೀನು ನನ್ನ ವಿರುದ್ಧ ಕೋಪಗೊಂಡಿರುವುದೂ, ಅಸಮಾಧಾನವಾಗಿರುವುದೂ ನನಗೆ ತಿಳಿದುಬಂತು. ಆದುದರಿಂದ ನಿನಗೆ ಮೂಗುದಾರವನ್ನೂ, ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.
Kannada BSI Bible 2016
ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನನಗೆ ವಿರೋಧವಾಗಿ ಕುಪಿತನಾಗಿರುವದೂ ಉಬ್ಬಿಕೊಂಡಿರುವದೂ ನನಗೆ ತಿಳಿದುಬಂತು. ಆದದರಿಂದ ನಿನಗೆ ಮೂಗುದಾರವನ್ನೂ ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿದ್ದಾನೆ.
Kannada Bible (KNCL) BSI 2016
ನನ್ನ ವಿರುದ್ಧ, ನಿನಗಿರುವ ಕ್ರೋಧ, ಗರ್ವ ತಿಳಿದಿದೆ ನನಗೆ, ಎಂದೇ ಹಾಕುವೆ ಮೂಗಿಗೆ ದಾರ, ಬಾಯಿಗೆ ಕಡಿವಾಣ. ನೀ ಬಂದ ದಾರಿಯಿಂದಲೇ ಅಟ್ಟುವೆ ನಿನ್ನನ್ನು ಹಿಂದಕ್ಕೆ’.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಿಗೆ ತಲುಪಿದೆ. ಆದ್ದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ; ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ, ನೀನು ಬಂದ ದಾರಿಯಿಂದಲೇ ನಿನ್ನನ್ನು ಹಿಂದಿರುಗಿಸುವೆನು.