Isaiah 37:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇವರು ಯೆಶಾಯನಿಗೆ, “ಅರಸನಾದ ಹಿಜ್ಕೀಯನು ಈ ದಿವಸವನ್ನು ಶೋಕದ ದಿವಸವನ್ನಾಗಿ ಘೋಷಿಸಿದ್ದಾನೆ. ಇದು ದುಃಖದ ಸಮಯವಾಗಿದೆ. ಇದು ದಿನತುಂಬಿ ತಾಯಿಯ ಹೊಟ್ಟೆಯೊಳಗಿಂದ ಹೊರಬರಲು ಶಕ್ತವಾಗಿಲ್ಲದ ಕೂಸಿನಂತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರು ಯೆಶಾಯನಿಗೆ, “ಹಿಜ್ಕೀಯನು ಹೀಗೆ ಹೇಳುತ್ತಾನೆ, ‘ಈ ದಿನದಲ್ಲಿ ನಮಗೆ ಮಹಾಕಷ್ಟವೂ, ಶಿಕ್ಷೆಯೂ, ನಿಂದೆಯೂ ಸಂಭವಿಸಿರುತ್ತದೆ. ಹೆರಿಗೆಯ ಕಾಲ ಬಂದದೆ; ಆದರೆ ಹೆರುವುದಕ್ಕೆ ಬಲ ಸಾಲದು.
Kannada BSI Bible 2016
ಆಗ ಅವರು ಅವನಿಗೆ--ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ದೂಷಣೆಯಾಗಿಯೂ ಇದೆ. ಪ್ರಸವವೇದನೆಯ ಕಾಲವು ಬಂದದೆ, ಆದರೆ ಹೆರುವದಕ್ಕೆ ಬಲ ಸಾಲದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಅದರಂತೆ ಯೆಶಾಯನ ಬಳಿಯಲ್ಲಿ - ಈ ದಿವಸದಲ್ಲಿ ನಮಗೆ ಮಹಾಕಷ್ಟವೂ ಶಿಕ್ಷೆಯೂ ನಿಂದೆಯೂ ಸಂಭವಿಸಿರುತ್ತದೆ. ಹೆರಿಗೆಯ ಕಾಲ ಬಂದದೆ; ಆದರೆ ಹೆರುವದಕ್ಕೆ ಬಲ ಸಾಲದು.
Kannada Bible (KNCL) BSI 2016
ಅವನಿಗೆ ಹೀಗೆಂದು ಹೇಳಿ: ‘ಈ ದಿನ ನಮಗೆ ಮಹಾಸಂಕಟದ ದಿನ, ದಂಡನೆಯ ದಿನ, ನಿಂದೆ ಅವಮಾನದ ದಿನ. ಹೆರಿಗೆಯ ಕಾಲ ಬಂದಿದೆ, ಆದರೆ ಹೆರುವುದಕ್ಕೆ ಶಕ್ತಿ ಸಾಲದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ಯೆಶಾಯನಿಗೆ, “ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ಅವಮಾನಕರವಾಗಿಯೂ ಇದೆ. ಏಕೆಂದರೆ ಹೆರಿಗೆಯ ಸಮಯವು ಬಂದಿದೆ ಆದರೆ ಹೆರುವುದಕ್ಕೆ ಶಕ್ತಿಯಿಲ್ಲ.