Isaiah 37:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೆಂದರೆ ಸ್ವಲ್ಪಮಂದಿ ಮಾತ್ರವೇ ಜೀವಂತವಾಗಿ ಉಳಿಯುವರು. ಅವರು ಜೆರುಸಲೇಮಿನಿಂದ ಹೊರಟುಹೋಗುವರು. ಉಳಿದವರು ಚೀಯೋನ್ ಪರ್ವತದಿಂದ ಬರುವರು.” ಯೆಹೋವನ ಗಾಢವಾದ ಪ್ರೀತಿಯೇ ಇದನ್ನು ಮಾಡುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರೂಸಲೇಮಿನಲ್ಲಿ ಉಳಿದವರು ಹರಡಿಕೊಳ್ಳುವರು, ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ಧಿಹೊಂದುವರು; ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
Kannada BSI Bible 2016
ಯೆರೂಸಲೇಮಿನಿಂದ ಉಳಿದ ವರು ಮತ್ತು ಚೀಯೋನ್‌ ಪರ್ವತದಿಂದ ತಪ್ಪಿಸಿ ಕೊಂಡವರು; ಹೊರಡುವರು ಇದನ್ನು ಸೈನ್ಯಗಳ ಕರ್ತನ ಆಸಕ್ತಿಯು ಮಾಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೂಸಲೇವಿುನಲ್ಲಿ ಉಳಿದವರು ಹರಡಿಕೊಳ್ಳುವರು; ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ಧಿಹೊಂದುವರು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.
Kannada Bible (KNCL) BSI 2016
ಆ ಅಳಿದುಳಿದವರು ಜೆರುಸಲೇಮಿನಲ್ಲೇ ಹರಡಿಕೊಳ್ಳುವರು, ಸಿಯೋನ್ ಪರ್ವತದಲ್ಲಿ ಅಭಿವೃದ್ಧಿಯಾಗುವರು, ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಆಗ್ರಹವೇ ಇದನ್ನು ಸಾಧಿಸುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಯೆರೂಸಲೇಮಿನಿಂದ ಉಳಿದವರೂ, ಚೀಯೋನ್ ಪರ್ವತದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೇನಾಧೀಶ್ವರ ಯೆಹೋವ ದೇವರ ಆಸಕ್ತಿಯು ಇದನ್ನು ನೆರವೇರಿಸುವುದು.