Isaiah 37:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಂದು ದಿವಸ ಸನ್ಹೇರೀಬನು ತನ್ನ ದೇವರಾದ ನಿಸ್ರೋಕನ ಮಂದಿರದಲ್ಲಿ ಪೂಜಿಸುತ್ತಿರುವಾಗ ಅವನ ಇಬ್ಬರು ಮಕ್ಕಳಾದ ಅದ್ರಮ್ಮೆಲೆಕ್ ಮತ್ತು ಸರೆಚರ್ ಎಂಬವರು ಅವನನ್ನು ಕತ್ತಿಯಿಂದ ಸಂಹರಿಸಿ ಅರರಾಟ್‌ಗೆ ಪಲಾಯನಗೈದರು. ಅನಂತರ ಸನ್ಹೇರೀಬನ ಮಗ ಏಸರ್‌ಹದ್ದೋನನು ಅಶ್ಶೂರದ ಹೊಸ ಅರಸನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಮನೆಯಲ್ಲಿ ಪೂಜಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು, ಅರರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.
Kannada BSI Bible 2016
ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್‌, ಸರೆಚೆರ್‌ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್‌ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್‌ಹದ್ದೋನನು ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಒಂದು ದಿವಸ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್‍ಹದ್ದೋನನು ಅರಸನಾದನು.
Kannada Bible (KNCL) BSI 2016
ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿನ ದೇವರಾದ ನಿಸ್ರೋಕನನ್ನು ಆರಾಧನೆ ಮಾಡುತ್ತಿರುವಾಗ, ಅದ್ರಮ್ಮೆಲೆಕ್ ಮತ್ತು ಸರೆಚೆರ್ ಎಂಬ ಅವನ ಇಬ್ಬರು ಮಕ್ಕಳು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ನಾಡಿಗೆ ಪಲಾಯನಗೈದರು. ಬಳಿಕ ಅವನ ಇನ್ನೊಬ್ಬ ಮಗ ಏಸರ್ ಹದ್ದೋನನು ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ದಿನ ಅವನು ತನ್ನ ದೇವರಾದ ನಿಸ್ರೋಕನ ಒಂದು ದಿನ ಅವನು ತನ್ನ ದೇವರಾದ ನಿಸ್ರೋಕನ ಆಲಯದಲ್ಲಿ ಆರಾಧನೆ ಮಾಡುತ್ತಿರುವಾಗ, ಅವನ ಮಕ್ಕಳಾದ ಅದ್ರಮ್ಮೆಲೆಕ್, ಸರೆಚೆರ್ ಎಂಬವರು ಅವನನ್ನು ಖಡ್ಗದಿಂದ ಕೊಂದು, ಅರಾರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗ ಏಸರ್‌ಹದ್ದೋನನು ಅವನಿಗೆ ಬದಲಾಗಿ ಅರಸನಾದನು.