Isaiah 37:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಗೋ, ನಾನು ಒಂದು ಆತ್ಮವನ್ನು ಅಶ್ಶೂರದ ವಿರುದ್ಧವಾಗಿ ಕಳುಹಿಸುತ್ತೇನೆ. ದೇಶಕ್ಕೆ ಬರಲಿರುವ ಅಪಾಯದ ಬಗ್ಗ ಎಚ್ಚರಿಕೆಯ ವರದಿಯು ರಾಜನಿಗೆ ಬರುತ್ತದೆ. ಅದನ್ನು ಕೇಳಿ ಅವನು ತನ್ನ ದೇಶಕ್ಕೆ ಹಿಂದಿರುಗುವನು. ಆಗ ಅವನ ದೇಶದಲ್ಲಿಯೇ ನಾನು ಅವನನ್ನು ಖಡ್ಗದಿಂದ ಸಂಹರಿಸುವೆನು.’“ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ನಾನು ಅವನ ಮೇಲೆ ಭಯದ ಆತ್ಮವನ್ನು ಬರ ಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ, ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬ ಯೆಹೋವನ ಮಾತನ್ನು ನಿಮ್ಮ ಯಜಮಾನನಿಗೆ ಹೇಳಿರಿ” ಎಂಬುದಾಗಿ ಉತ್ತರಕೊಟ್ಟನು.
Kannada BSI Bible 2016
ಇಗೋ, ನಾನು ಅವನ ಮೇಲೆ ಒಂದು ವಿಪತ್ತನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬ ಈ ಮಾತುಗಳನ್ನು ನಿಮ್ಮ ಯಜಮಾನರಿಗೆ ತಿಳಿಸಿರಿ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನಾನು ಅವನ ಮೇಲೆ [ಭಯದ] ಆತ್ಮವನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬೀ ಯೆಹೋವನ ಮಾತನ್ನು ನಿಮ್ಮ ಯಜಮಾನನಿಗೆ ಹೇಳಿರಿ ಎಂಬದಾಗಿ ಉತ್ತರಕೊಟ್ಟನು.
Kannada Bible (KNCL) BSI 2016
ಅವನ ಮೇಲೆ ಭಯಾತ್ಮನನ್ನು ಬರಮಾಡುವೆನು, ಅವನ ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಅಲ್ಲೆ ಕತ್ತಿಗೆ ತುತ್ತಾಗುವಂತೆ ಮಾಡುವೆನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ನಾನು ಅವರ ಮೇಲೆ ಆತ್ಮವನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತನ್ನ ದೇಶಕ್ಕೆ ಹಿಂದಿರುಗುವನು. ಇದಲ್ಲದೆ ಅವನು ತನ್ನ ದೇಶದಲ್ಲಿ ಖಡ್ಗಕ್ಕೆ ತುತ್ತಾಗುವಂತೆ ಮಾಡುವೆನು,’ ” ಎಂದು ಹೇಳಿದನು.