Isaiah 38:12 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಮನೆಯು ಅಂದರೆ ನನ್ನ ಕುರುಬನ ಗುಡಾರವು ಕೀಳಲ್ಪಟ್ಟು ನನ್ನಿಂದ ತೆಗೆಯಲ್ಪಡುತ್ತಿದೆ. ಒಬ್ಬನು ಮಗ್ಗದಲ್ಲಿ ಬಟ್ಟೆಯನ್ನು ಸುತ್ತಿ ಕತ್ತರಿಸಿಬಿಡುವಂತೆ ನಾನು ಕತ್ತರಿಸಲ್ಪಟ್ಟಿದ್ದೇನೆ. ನನ್ನ ಆಯುಷ್ಯವನ್ನು ಚಿಕ್ಕ ವಯಸ್ಸಿನಲ್ಲಿಯೇ ಮುಗಿಸಿಬಿಟ್ಟಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಆಶ್ರಯವು ಕುರುಬನ ಗುಡಾರದಂತೆ ಕಿತ್ತು, ನನ್ನ ಕಡೆಯಿಂದ ಒಯ್ಯಲ್ಪಟ್ಟಿದೆ. ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೆಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ, ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀ.
Kannada BSI Bible 2016
ನನ್ನ ಆಯುಷ್ಯ ಮುಗಿಯಿತು ಮತ್ತು ಕುರುಬನ ಗುಡಾರದಂತೆ ನನ್ನಿಂದ ತೆಗೆದುಹಾಕಲ್ಪಟ್ಟಿದೆ; ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೇಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಆಶ್ರಯವು ಕುರುಬನ ಗುಡಾರದಂತೆ ಕಿತ್ತು ನನ್ನ ಕಡೆಯಿಂದ ಒಯ್ಯಲ್ಪಟ್ಟಿದೆ; ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೆಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಆಶ್ರಯವು ಕುರುಬನ ಗುಡಾರದಂತೆ ಕಿತ್ತು ನನ್ನ ಕಡೆಯಿಂದ ಒಯ್ಯಲಾಗಿದೆ. ದೇವರು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೆಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; ಹಗಲುರಾತ್ರಿ ದೇವರೇ, ನೀವು ನನ್ನನ್ನು ಅಂತ್ಯಗೊಳಿಸುತ್ತೀರಿ.