Isaiah 38:13 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಡೀರಾತ್ರಿ ನಾನು ಸಿಂಹದಂತೆ ಗರ್ಜಿಸಿದೆನು. ಆದರೆ ಸಿಂಹವು ಎಲುಬುಗಳನ್ನು ಜಗಿದು ಪುಡಿಮಾಡುವಂತೆ ನನ್ನ ನಿರೀಕ್ಷೆಯೆಲ್ಲಾ ಜಜ್ಜಿಹೋಯಿತು. ನೀನು ನನ್ನ ಜೀವಿತವನ್ನು ಅಷ್ಟು ಅಲ್ಪಕಾಲಕ್ಕೇ ಕೊನೆಗೊಳಿಸಿದೆ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಬೆಳಗಿನ ತನಕ ಕೂಗಿಕೊಂಡೇ ಇದ್ದೆನು. ಆತನು ಸಿಂಹದಂತೆ ನನ್ನ ಎಲುಬುಗಳನ್ನೆಲ್ಲಾ ಮುರಿಯುತ್ತಿದ್ದರೂ, ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀಯಲ್ಲಾ ಎಂದು ಪ್ರಲಾಪಿಸಿದೆನು.
Kannada BSI Bible 2016
ಆತನು ಸಿಂಹದಂತೆ ಎಲುಬುಗಳನ್ನೆಲ್ಲಾ ಮುರಿದಿದ್ದಾಗ್ಯೂ ಬೆಳಗಿನ ವರೆಗೂ ತಾಳಿಕೊಂಡೇ ಇದ್ದೆನು; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಸಿಂಹದಂತೆ ನನ್ನ ಎಲುಬುಗಳನ್ನೆಲ್ಲಾ ಮುರಿಯುತ್ತಿದ್ದರೂ ಬೆಳಗಿನ ತನಕ ತಡಕೊಂಡೇ ಇದ್ದೆನು. ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀಯಲ್ಲಾ ಎಂದು ಪ್ರಲಾಪಿಸಿದೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೌದು, ದೇವರು ಸಿಂಹದಂತೆ ನನ್ನ ಎಲುಬುಗಳನ್ನೆಲ್ಲಾ ಮುರಿಯುತ್ತಿದ್ದರೂ, ಬೆಳಗಿನತನಕ ತಡೆದುಕೊಂಡೇ ಇದ್ದೆನು. ನೀವು ನನ್ನನ್ನು ಅಂತ್ಯಗೊಳಿಸುತ್ತೀರಲ್ಲಾ ಎಂದು ಹಗಲುರಾತ್ರಿ ಪ್ರಲಾಪಿಸಿದೆನು.