Isaiah 38:14 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಪಾರಿವಾಳದಂತೆ ಕೂಗಿಕೊಂಡೆನು. ಪಕ್ಷಿಯಂತೆ ಅರಚಿಕೊಂಡೆನು. ನನ್ನ ಕಣ್ಣುಗಳು ಸ್ವರ್ಗದ ಕಡೆಗೆ ನೋಡುತ್ತಾ ಆಯಾಸಗೊಂಡವು. ನನ್ನ ಒಡೆಯನೇ, ನಾನು ತುಂಬಾ ಚಿಂತಾಕ್ರಾಂತನಾಗಿದ್ದೇನೆ. ನೀನು ನನಗೆ ಸಹಾಯ ಮಾಡುವುದಾಗಿ ವಾಗ್ದಾನ ಮಾಡು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಬಾನಕ್ಕಿಯಂತೆಯೂ, ಬಕದ ಹಾಗೂ ಕೀಚುಗುಟ್ಟಿದೆನು, ಪಾರಿವಾಳದಂತೆ ಮೊರೆಯಿಟ್ಟೆನು, ಯೆಹೋವನೇ, ನಾನು ಬಾಧೆಪಡುತ್ತಿದ್ದೇನೆ, ನನಗೆ ಆಶ್ರಯವಾಗು ಎಂದು ನಿನ್ನನು ದೃಷ್ಟಿಸುತ್ತಾ ಕಂಗೆಟ್ಟೆನು.
Kannada BSI Bible 2016
ನಾನು ಬಾನಕ್ಕಿಯಂತೆಯೂ ಬಕದ ಹಾಗೂ ಕೀಚುಗುಟ್ಟಿದೆನು ಪಾರಿವಾಳದಂತೆ ಮೂಲುಗುತ್ತಿದ್ದೆನು. ನನ್ನ ಕಣ್ಣುಗಳು ಮೇಲಕ್ಕೆ ನೋಡುವದರಿಂದ ಕ್ಷೀಣವಾದವು. ಓ ಕರ್ತನೇ, ನಾನು ಬಾಧೆಪಡುತ್ತಿದ್ದೇನೆ; ನೀನು ನನಗೆ ಆಶ್ರಯನಾಗು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಬಾನಕ್ಕಿಯಂತೆಯೂ ಬಕದ ಹಾಗೂ ಕೀಚುಗುಟ್ಟಿದೆನು, ಪಾರಿವಾಳದಂತೆ ಮೊರೆಯಿಟ್ಟೆನು, ಯೆಹೋವನೇ, ನಾನು ಬಾಧೆಪಡುತ್ತಿದ್ದೇನೆ, ನನಗೆ ಹೊಣೆಯಾಗು ಎಂದು ಮೇಲೆ ಮೇಲೆ ದೃಷ್ಟಿಸುತ್ತಾ ಕಂಗೆಟ್ಟೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಬಾನಕ್ಕಿಯಂತೆಯೂ, ಬಕದಂತೆಯೂ ಕೀಚುಗುಟ್ಟಿದೆನು. ಪಾರಿವಾಳದಂತೆ ಗುಬ್ಬಳಿಸುತ್ತಿದ್ದೆನು. ನನ್ನ ಕಣ್ಣುಗಳು ಮೇಲಕ್ಕೆ ನೋಡುವುದರಿಂದ ಕ್ಷೀಣವಾದವು. ಕರ್ತದೇವರೇ, ನಾನು ಬಾಧೆಪಡುತ್ತಿದ್ದೇನೆ, ನೀವು ನನಗೆ ಆಶ್ರಯರಾಗಿರಿ.”