Isaiah 38:16 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಒಡೆಯನೇ, ನನ್ನ ಆತ್ಮವು ಪುನರುಜ್ಜೀವಿಸುವಂತೆ ಮಾಡು. ನನ್ನ ಆತ್ಮವು ಬಲಗೊಂಡು ಆರೋಗ್ಯದಾಯಕವಾಗುವಂತೆ ಸಹಾಯಮಾಡು. ನಾನು ತಿರುಗಿ ಸ್ವಸ್ಥತೆ ಹೊಂದುವಂತೆ ಮಾಡು. ನಾನು ಮತ್ತೆ ಜೀವಿಸುವಂತೆ ಮಾಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ಇಂಥಾ ಸಂಭವಗಳಿಂದ ಮನುಷ್ಯರು ಬದುಕುತ್ತಾರೆ. ಅವುಗಳಿಂದಲೇ ನನ್ನ ಆತ್ಮವು ಜೀವಿಸುತ್ತದೆ. ಈಗ ನನ್ನನ್ನು ಸ್ವಸ್ಥಮಾಡಿ ಬದುಕುವಂತೆ ಮಾಡಿದೆ.
Kannada BSI Bible 2016
ಓ ಕರ್ತನೇ, ಇಂಥಾ ಸಂಬಂಧಗಳಿಂದ ಮನುಷ್ಯರು ಬದುಕುತ್ತಾರೆ, ಇವೆಲ್ಲವುಗಳಿಂದಲೇ ನನ್ನ ಆತ್ಮದಲ್ಲಿ ಜೀವವುಂಟು, ಹೀಗೆ ನನ್ನನ್ನು ನೀನು ಸ್ವಸ್ಥಮಾಡಿ ಬದುಕುವಂತೆ ಮಾಡಿದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ಇಂಥಾ ಸಂಭವಗಳಿಂದ ಮನುಷ್ಯರು ಬದುಕುತ್ತಾರೆ, ಅವುಗಳಿಂದಲೇ ನನ್ನ ಆತ್ಮವು ಜೀವಿಸುತ್ತದೆ. ಈಗ ನನ್ನನ್ನು ಸ್ವಸ್ಥಮಾಡಿ ಬದುಕಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕರ್ತದೇವರೇ, ಇಂಥಾ ಸಂಬಂಧಗಳಿಂದ ಮನುಷ್ಯರು ಬದುಕುತ್ತಾರೆ. ಇವೆಲ್ಲವುಗಳಿಂದಲೇ ನನ್ನ ಆತ್ಮದಲ್ಲಿ ಜೀವವುಂಟು. ಹೀಗೆ ನನ್ನನ್ನು ನೀವು ಸ್ವಸ್ಥಮಾಡಿ ಬದುಕುವಂತೆ ಮಾಡಿದಿರಿ.