Isaiah 38:18 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸತ್ತವರು ನಿನ್ನನ್ನು ಸ್ತುತಿಸುವದಿಲ್ಲ. ಪಾತಾಳದಲ್ಲಿರುವ ಜನರು ನಿನ್ನನ್ನು ಸ್ತುತಿಸುವದಿಲ್ಲ. ಸತ್ತುಹೋದವರು ಸಹಾಯಕ್ಕಾಗಿ ನಿನ್ನ ಮೇಲೆ ಭರವಸವಿಡರು. ಅವರು ಭೂಮಿಯಲ್ಲಿರುವ ಆಳವಾದ ಕುಣಿಗೆ ಸೇರುವರು. ಅವರು ತಿರುಗಿ ಮಾತನಾಡುವದೇ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಾತಾಳದವರು ನಿನ್ನನ್ನು ಸ್ತುತಿಸುವುದಿಲ್ಲ, ಸತ್ತವರು ನಿನ್ನನ್ನು ಕೀರ್ತಿಸುವುದಿಲ್ಲ, ಅಧೋಲೋಕಕ್ಕೆ ಇಳಿದುಹೋದವರು ನಿನ್ನ ಸತ್ಯ ಸಂಧತೆಯನ್ನು ಆಶ್ರಯಿಸುವುದಿಲ್ಲ.
Kannada BSI Bible 2016
ಸಮಾಧಿಯು ನಿನ್ನನ್ನು ಹೊಗಳುವದಿಲ್ಲ, ಮರಣವು ನಿನ್ನನ್ನು ಕೊಂಡಾಡುವದಿಲ್ಲ; ಕುಣಿಯೊಳಕ್ಕೆ ಹೋಗುವವರು ನಿನ್ನ ಸತ್ಯತೆಯಲ್ಲಿ ಭರವಸವಿಡಲಾರರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಾತಾಳದವರು ನಿನ್ನನ್ನು ಸ್ತುತಿಸರು, ಸತ್ತವರು ನಿನ್ನನ್ನು ಕೀರ್ತಿಸರು, ಅಧೋಲೋಕಕ್ಕೆ ಇಳಿದುಹೋದವರು ನಿನ್ನ ಸತ್ಯಸಂಧತೆಯನ್ನು ಆಶ್ರಯಿಸಲಾರರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮಾಧಿಯು ನಿನ್ನನ್ನು ಹೊಗಳುವುದಿಲ್ಲ. ಮರಣವು ನಿನ್ನನ್ನು ಕೊಂಡಾಡುವುದಿಲ್ಲ. ಕುಣಿಯೊಳಕ್ಕೆ ಹೋಗುವವರು ನಿಮ್ಮ ಸತ್ಯತೆಯಲ್ಲಿ ಭರವಸವಿಡಲಾರರು.