Isaiah 38:20 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಹೇಳುವುದೇನೆಂದರೆ: “ಯೆಹೋವನು ನನ್ನನ್ನು ರಕ್ಷಿಸಿದನು. ನಮ್ಮ ಜೀವಮಾನದ ಕಾಲವೆಲ್ಲಾ ಯೆಹೋವನ ಆಲಯದಲ್ಲಿ ನಾವು ಹಾಡುತ್ತಾ ವಾದ್ಯಬಾರಿಸುತ್ತಾ ಆತನನ್ನು ಸ್ತುತಿಸುವೆವು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನನಗೆ ರಕ್ಷಣಾಪರನಾಗಿದ್ದಾನೆ. ನಮ್ಮ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ನಮ್ಮ ಕಿನ್ನರಿ ವೀಣೆಗಳನ್ನು ನುಡಿಸುವೆವು.”
Kannada BSI Bible 2016
ಕರ್ತನು ನನ್ನನ್ನು ರಕ್ಷಿಸಲು ಸಿದ್ಧನಾಗಿ ದ್ದನು; ಆದದರಿಂದ ಕರ್ತನ ಆಲಯದಲ್ಲಿ ನಮ್ಮ ಜೀವ ಮಾನದ ದಿವಸಗಳಲ್ಲೆಲ್ಲಾ ತಂತಿವಾದ್ಯಗಳಿಂದ ಹಾಡು ಗಳನ್ನು ನಾವು ಹಾಡುವೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನನಗೆ ರಕ್ಷಣಪರನಾಗಿದ್ದಾನಷ್ಟೆ; ನಮ್ಮ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ನಮ್ಮ ಕಿನ್ನರಿ ವೀಣೆಗಳನ್ನು ನುಡಿಸುವೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ನನ್ನನ್ನು ರಕ್ಷಿಸುವರು. ಆದ್ದರಿಂದ ಯೆಹೋವ ದೇವರ ಆಲಯದಲ್ಲಿ ನಮ್ಮ ಜೀವಮಾನದ ದಿವಸಗಳಲ್ಲೆಲ್ಲಾ ತಂತಿವಾದ್ಯಗಳಿಂದ ನಮ್ಮ ಹಾಡುಗಳನ್ನು ನಾವು ಹಾಡುವೆವು.
Recommended Reading