Isaiah 38:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೋವನೇ, ನಾನು ನಿನಗೆ ಪೂರ್ಣಹೃದಯದಿಂದ ನಂಬಿಗಸ್ತನಾಗಿ ಸೇವೆಮಾಡಿದ್ದನ್ನು ಜ್ಞಾಪಿಸಿಕೋ. ನಿನಗೆ ಇಷ್ಟವಾದದ್ದನ್ನೆಲ್ಲ ನಾನು ಮಾಡಿದ್ದೇನೆ” ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಿಜ್ಕೀಯನು, “ಯೆಹೋವನೇ, ನಾನು ನಂಬಿಗಸ್ತನಾಗಿಯೂ, ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನ್ನು ನೆನಪುಮಾಡಿಕೋ” ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.
Kannada BSI Bible 2016
ಓ ಕರ್ತನೇ, ನಾನು ನಿನ್ನ ಮುಂದೆ ಸತ್ಯವಾಗಿಯೂ ಯಥಾರ್ಥ ಹೃದಯದಿಂದಲೂ ನಡೆದು ನಿನ್ನ ದೃಷ್ಟಿ ಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಪು ಮಾಡಿಕೋ ಎಂದು ಬೇಡಿಕೊಂಡು ವ್ಯಥೆಪಟ್ಟು ಅತ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನಾನು ನಂಬಿಗಸ್ತನಾಗಿಯೂ ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದದ್ದನ್ನು ನೆನಪುಮಾಡಿಕೋ ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.
Kannada Bible (KNCL) BSI 2016
“ಸರ್ವೇಶ್ವರಾ, ನಿಮಗೆ ಶ್ರದ್ಧೆಯಿಂದಲೂ, ಪ್ರಾಮಾಣಿಕತೆಯಿಂದಲೂ ಸೇವೆಮಾಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಂಡಿದ್ದೇನೆ. ಇದನ್ನು ದಯೆಯಿಂದ ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥನೆ ಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೋವ ದೇವರೇ, ನಾನು ಸತ್ಯದಿಂದಲೂ, ಪೂರ್ಣಹೃದಯದಿಂದಲೂ ನಿಮ್ಮ ಮುಂದೆ ನಡೆದು, ನಿಮ್ಮ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ,” ಎಂದು ಬೇಡಿಕೊಂಡನು. ಹೀಗೆ ಹಿಜ್ಕೀಯನು ವ್ಯಥೆಪಟ್ಟು ಅತ್ತನು.