Isaiah 38:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಹಿಜ್ಕೀಯನ ಬಳಿಗೆ ಹೋಗಿ ಹೇಳು, ನಿನ್ನ ಪೂರ್ವಿಕನಾದ ದಾವೀದನ ದೇವರಾದ ಯೆಹೋವನು ಹೇಳುವುದೇನೆಂದರೆ: ‘ನಿನ್ನ ಪ್ರಾರ್ಥನೆಯನ್ನು ನಾನು ಕೇಳಿದೆನು; ನಿನ್ನ ಕಣ್ಣೀರನ್ನು ನೋಡಿದೆನು. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಸೇರಿಸಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ದಾವೀದನ ಪೂರ್ವಿಕರಾದ ಯೆಹೋವನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ.
Kannada BSI Bible 2016
ನೀನು ಹೋಗಿ ಹಿಜ್ಕೀ ಯನಿಗೆ ಹೇಳತಕ್ಕದ್ದೇನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ನೋಡಿದ್ದೇನೆ; ಇಗೋ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನೂ ಕೂಡಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ - ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ; ನಿನ್ನ ಆಯುಷ್ಯಕ್ಕೆ ಹದಿನೈದು ವರುಷಗಳನ್ನು ಕೂಡಿಸುತ್ತೇನೆ.
Kannada Bible (KNCL) BSI 2016
“ನೀನು ಹೋಗಿ ಹಿಜ್ಕೀಯನಿಗೆ ಹೀಗೆಂದು ತಿಳಿಸು: ‘ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಿನ್ನ ಆಯುಷ್ಯಕ್ಕೆ ಇನ್ನೂ ಹದಿನೈದು ವರ್ಷಗಳನ್ನು ಸೇರಿಸುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಹೋಗಿ ಹಿಜ್ಕೀಯನಿಗೆ ಹೀಗೆ ಹೇಳು, ‘ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೇಳಿದ್ದೇನೆಂದರೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ಕಂಡಿದ್ದೇನೆ. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಾಗಿ ಕೂಡಿಸುತ್ತೇನೆ.