Isaiah 38:8 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಗೋ, ಆಹಾಜನ ಮೆಟ್ಟಿಲಲ್ಲಿರುವ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಹೋಗುವಂತೆ ಮಾಡುವೆನು ಎಂದು ನಿನ್ನ ದೇವರಾಗಿರುವ ಯೆಹೋವನು ಹೇಳುತ್ತಾನೆಂಬದಾಗಿ ತಿಳಿಸು” ಎಂದು ಹೇಳಿದನು. ಅದರಂತೆ ಮೆಟ್ಟಿಲಲ್ಲಿರುವ ಸೂರ್ಯನ ನೆರಳು ಹತ್ತು ಮೆಟ್ಟಿಲು ಹಿಂದಕ್ಕೆ ಹೋಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಸೂರ್ಯನ ಇಳಿತವನ್ನು ಆಹಾಜನ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡುವೆನು’ ಎಂದು ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆಂಬುದಾಗಿ ತಿಳಿಸು” ಎಂದು ಆಜ್ಞಾಪಿಸಿದನು. ಅದರಂತೆ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬಂತು.
Kannada BSI Bible 2016
ಆಗ ಇಗೋ, ಸೂರ್ಯನ ಇಳಿತರದಿಂದ ಆಹಾಜನ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಲು ಹಿಂದಕ್ಕೆ ಬರಮಾಡುವೆನು ಅಂದನು. ಅದರಂತೆ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಲು ಹಿಂದಕ್ಕೆ ಬಂತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಸೂರ್ಯನ ಇಳಿತರದಿಂದ ಆಹಾಜನ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಲು ಹಿಂದಕ್ಕೆ ಬರಮಾಡುವೆನು ಎಂದು ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆಂಬದಾಗಿ ತಿಳಿಸು ಎಂದು ಆಜ್ಞಾಪಿಸಿದನು. ಅದರಂತೆ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಲು ಹಿಂದಕ್ಕೆ ಬಂತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ಸೂರ್ಯನ ಇಳಿತವನ್ನು ಆಹಾಜನ ಸೋಪಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬರುವುದು,’ ” ಎಂದನು. ಅದರಂತೆಯೇ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬಂದಿತು.