Isaiah 39:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸಮಯದಲ್ಲಿ ಬಲದಾನ್ ಎಂಬವನ ಮಗನಾದ ಮೆರೋದಕಬಲದಾನ್ ಎಂಬವನು ಬಾಬಿಲೋನಿನ ಅರಸನಾಗಿದ್ದನು. ಅವನಿಗೆ ಹಿಜ್ಕೀಯನು ಅಸ್ವಸ್ಥನಾಗಿದ್ದಾನೆಂಬ ವರ್ತಮಾನ ತಲುಪಿದ್ದರಿಂದ ಅವನು ಹಿಜ್ಕೀಯನಿಗೆ ಒಂದು ಪತ್ರವನ್ನೂ ಜೊತೆಗೆ ಬಹುಮಾನಗಳನ್ನೂ ತನ್ನ ದೂತರ ಸಂಗಡ ಕಳುಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಮೆರೋದಕ ಬಲದಾನನೆಂಬುವನು ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿ ಅವನಿಗೆ ಪತ್ರವನ್ನೂ, ಬಹುಮಾನವನ್ನೂ ಕಳುಹಿಸಿದನು.
Kannada BSI Bible 2016
ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಮೆರೋದಕ ಬಲದಾನನೆಂಬವನು ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿ ಅವನಿಗೆ ಪತ್ರಗ ಳನ್ನೂ ಬಹುಮಾನವನ್ನೂ ಕಳುಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಮೆರೋದಕಬಲದಾನನೆಂಬವನು ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿ ಅವನಿಗೆ ಪತ್ರವನ್ನೂ ಬಹುಮಾನವನ್ನೂ ಕಳುಹಿಸಿದನು.
Kannada Bible (KNCL) BSI 2016
ಅದೇ ಕಾಲದಲ್ಲಿ ಬಲದಾನನ ಮಗನು ಹಾಗೂ ಬಾಬಿಲೋನಿಯದ ಅರಸನು ಆದ ಮೆರೋದಕಬಲದಾನ ಎಂಬವನು, ರಾಜ ಹಿಜ್ಕೀಯನು ರೋಗದಿಂದ ಗುಣಹೊಂದಿದನು ಎಂದು ಕೇಳಿ ಅವನಿಗೆ ಉಡುಗೊರೆಯೊಂದಿಗೆ ಒಂದು ಪತ್ರವನ್ನು ಕಳುಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬಿಲೋನಿನ ಅರಸನೂ ಆದ ಮೆರೋದಕ್ ಬಲದಾನ್ ಎಂಬವನು, ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿದ್ದರಿಂದ ಪತ್ರಗಳನ್ನೂ, ಉಡುಗೊರೆಗಳನ್ನೂ ಕಳುಹಿಸಿದನು.