Isaiah 39:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಹೋಗಿ, “ನಿನ್ನ ಬಳಿಗೆ ಬಂದವರು ಎಲ್ಲಿಯವರು? ಅವರು ಏನನ್ನು ಹೇಳಿದರು?” ಎಂದು ವಿಚಾರಿಸಿದನು. ಅದಕ್ಕೆ ಹಿಜ್ಕೀಯನು, “ಇವರು ಬಹುದೂರ ದೇಶದಿಂದ ನನ್ನನ್ನು ಸಂಧಿಸಲು ಬಂದಿದ್ದಾರೆ. ಅವರ ದೇಶ ಬಾಬಿಲೋನ್” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, “ಆ ಮನುಷ್ಯರು ಎಲ್ಲಿಯವರು? ಏನು ಹೇಳಿದರು?” ಎಂದು ಕೇಳಲು ಅವನು, “ಅವರು ಬಹುದೂರ ದೇಶದಿಂದ ಬಾಬೆಲಿನಿಂದ ನನ್ನ ಬಳಿಗೆ ಬಂದವರು” ಎಂದು ಉತ್ತರಕೊಟ್ಟನು.
Kannada BSI Bible 2016
ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀ ಯನ ಬಳಿಗೆ ಬಂದು ಅವನಿಗೆ--ಈ ಮನುಷ್ಯರು ಎಲ್ಲಿಂದ ನಿನ್ನ ಬಳಿಗೆ ಬಂದರು, ಅವರು ನಿನಗೆ ಏನು ಹೇಳಿದರು ಎಂದು ಕೇಳಲು, ಹಿಜ್ಕೀಯನು--ಅವರು ಬಹುದೂರ ದೇಶವಾದ ಬಾಬೆಲಿನಿಂದ ಬಂದರು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಪ್ರವಾದಿಯಾದ ಯೆಶಾಯನು ಹಿಜ್ಕೀಯನ ಬಳಿಗೆ ಬಂದು ಅವನನ್ನು - ಆ ಮನುಷ್ಯರು ಎಲ್ಲಿಯವರು, ಏನು ಹೇಳಿದರು ಎಂದು ಕೇಳಲು ಅವನು - ಅವರು ಬಹುದೂರದೇಶದಿಂದ ಬಾಬೆಲಿನಿಂದ ನನ್ನ ಬಳಿಗೆ ಬಂದವರು ಎಂದು ಉತ್ತರ ಕೊಟ್ಟನು.
Kannada Bible (KNCL) BSI 2016
ಆಗ ಪ್ರವಾದಿ ಯೆಶಾಯನು ಹಿಜ್ಕೀಯನ ಬಳಿಗೆ ಬಂದು, “ಆ ದೂತರು ಎಲ್ಲಿಯವರು? ಏನು ಕೇಳಿದರು?” ಎಂದನು. ಅದಕ್ಕೆ ಹಿಜ್ಕೀಯನು, “ಅವರು ಬಹುದೂರದ ನಾಡಾದ ಬಾಬಿಲೋನಿಯದಿಂದ ಬಂದವರು,” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, “ಆ ಮನುಷ್ಯರು ಎಲ್ಲಿಂದ ಬಂದವರು ಮತ್ತು ಅವರು ನಿನಗೆ ಏನು ಹೇಳಿದರು?” ಎಂದು ಕೇಳಿದನು. ಹಿಜ್ಕೀಯನು, “ಅವರು ಬಹುದೂರ ದೇಶವಾದ ಬಾಬಿಲೋನಿನಿಂದ ನನ್ನ ಬಳಿಗೆ ಬಂದವರು,” ಎಂದು ಹೇಳಿದನು.