Isaiah 39:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿನ್ನ ಮನೆಯಲ್ಲಿ ಅವರು ಏನು ನೋಡಿದರು?” ಎಂದು ತಿರುಗಿ ಯೆಶಾಯನು ಪ್ರಶ್ನಿಸಿದನು. “ಅವರು ನನ್ನ ಅರಮನೆಯಲ್ಲಿರುವದನ್ನೆಲ್ಲಾ ನೋಡಿದರು. ನಾನು ನನ್ನ ಐಶ್ವರ್ಯವನ್ನೆಲ್ಲಾ ಅವರಿಗೆ ತೋರಿಸಿದೆನು” ಎಂದು ಹಿಜ್ಕೀಯನು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಶಾಯನು ತಿರುಗಿ ಹಿಜ್ಕೀಯನಿಗೆ, “ಅವರು ನಿನ್ನ ಅರಮನೆಯಲ್ಲಿ ಏನು ನೋಡಿದರು?” ಎಂದು ಕೇಳಲು ಅವನು, “ಅರಮನೆಯಲ್ಲಿರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ವಸ್ತು ಒಂದೂ ಇರುವುದಿಲ್ಲ” ಎಂದನು.
Kannada BSI Bible 2016
ಅದಕ್ಕೆ ಅವನು ಅವನನ್ನು--ಅವರು ನಿನ್ನ ಮನೆಯಲ್ಲಿ ಏನನ್ನು ನೋಡಿದರು ಎಂದು ಕೇಳಲು, ಹಿಜ್ಕೀಯನು--ನನ್ನ ಮನೆಯಲ್ಲಿರುವದೆಲ್ಲ ವನ್ನು ಅವರು ನೋಡಿದರು; ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಏನೂ ಇರು ವದಿಲ್ಲ ಎಂದು ಉತ್ತರಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಶಾಯನು ತಿರಿಗಿ ಅವನನ್ನು - ಅವರು ನಿನ್ನ ಅರಮನೆಯಲ್ಲಿ ಏನು ನೋಡಿದರು ಎಂದು ಕೇಳಲು ಅವನು - ಅರಮನೆಯಲ್ಲಿರುವದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರುವದಿಲ್ಲ ಅಂದನು.
Kannada Bible (KNCL) BSI 2016
ಯೆಶಾಯನು ಮತ್ತೆ ಅವನನ್ನು, “ಅವರು ನಿನ್ನ ಅರಮನೆಯಲ್ಲಿ ಏನೇನನ್ನು ನೋಡಿದರು?” ಎಂದು ಕೇಳಲು ಹಿಜ್ಕೀಯನು, “ಅರಮನೆಯಲ್ಲಿ ಇರುವುದೆಲ್ಲವನ್ನು ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದ ಒಡವೆ ವಸ್ತು ಒಂದೂ ಇಲ್ಲ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೆಶಾಯನು ಪುನಃ ಅವನನ್ನು, “ಅವರು ನಿನ್ನ ಅರಮನೆಯಲ್ಲಿ ಏನನ್ನು ನೋಡಿದರು?” ಎಂದು ಕೇಳಿದನು. ಹಿಜ್ಕೀಯನು, “ನನ್ನ ಅರಮನೆಯಲ್ಲಿ ಇರುವುದೆಲ್ಲವನ್ನು ಅವರು ನೋಡಿದರು, ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಏನೂ ಇಲ್ಲ,” ಎಂದು ಉತ್ತರಕೊಟ್ಟನು.