Isaiah 39:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ನಿನ್ನ ಮನೆಯಲ್ಲಿರುವ ಎಲ್ಲಾ ವಸ್ತುಗಳೂ ನಿನ್ನ ಪೂರ್ವಿಕರು ಕೂಡಿಟ್ಟಿದ್ದ ಎಲ್ಲಾ ವಸ್ತುಗಳೂ ಇಲ್ಲಿಂದ ಬಾಬಿಲೋನಿಗೆ ಒಯ್ಯುವ ಕಾಲವು ಬರುವದು. ಇಲ್ಲಿ ಏನೂ ಉಳಿಯುವದಿಲ್ಲ, ಇದು ಸರ್ವಶಕ್ತನಾದ ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬಿಲೋನಿಗೆ ಒಯ್ಯಲ್ಪಡುವ ದಿನವು ಬರುವುದು, ಇಲ್ಲೇನೂ ಉಳಿಯುವುದಿಲ್ಲ.
Kannada BSI Bible 2016
ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನ ವರೆಗೆ ನಿನ್ನ ಮನೆಯಲ್ಲಿ ಸಂಗ್ರಹವಾದ ದ್ದೆಲ್ಲವೂ ಬಾಬೆಲಿಗೆ ಒಯ್ಯಲ್ಪಡುವ ದಿವಸವು ಬರು ವದು. ಇಲ್ಲೇನೂ ಉಳಿಯುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು - ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೆ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬೆಲಿಗೆ ಒಯ್ಯಲ್ಪಡುವ ದಿನ ಬರುವದು; ಇಲ್ಲೇನೂ ಉಳಿಯುವದಿಲ್ಲ.
Kannada Bible (KNCL) BSI 2016
ನಿನ್ನ ಪೂರ್ವಜರ ಕಾಲದಿಂದ ಇಂದಿನವರೆಗೆ ಅರಮನೆಯಲ್ಲಿ ಕೂಡಿಸಿಟ್ಟ ಎಲ್ಲವನ್ನು ಬಾಬಿಲೋನಿಯಾಗೆ ಕೊಂಡೊಯ್ಯುವ ದಿನ ಬರುವುದು; ಇಲ್ಲಿ ಏನೂ ಉಳಿಯುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ನಿನ್ನ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬಿಲೋನಿಗೆ ಕೊಂಡೊಯ್ಯುವ ದಿವಸ ಬರುವುದು. ಇಲ್ಲಿ ಏನೂ ಉಳಿಯುವುದಿಲ್ಲ ಎಂದು ಯೆಹೋವ ದೇವರು ಹೇಳಿದರು.