Isaiah 39:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕೆ ಹಿಜ್ಕೀಯನು ಯೆಶಾಯನಿಗೆ, “ಯೆಹೋವನ ಮಾತುಗಳು ಒಳ್ಳೆಯವೇ ಸರಿ” ಎಂದು ಹೇಳಿದನು. (ಯಾಕೆಂದರೆ ತಾನು ಅರಸನಾಗಿರುವಷ್ಟು ಕಾಲ ದೇಶದಲ್ಲಿ ಸಮಾಧಾನವಿರುವುದೆಂದು ಅವನು ಯೋಚಿಸಿಕೊಂಡನು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಹೇಗೂ ನನ್ನ ಜೀವಮಾನದಲ್ಲಿ ತಪ್ಪದೆ ಸೌಭಾಗ್ಯವಿರುವುದು” ಎಂದುಕೊಂಡು ಹಿಜ್ಕೀಯನು ಯೆಶಾಯನಿಗೆ, “ನೀನು ತಿಳಿಸಿದ ಯೆಹೋವನ ಮಾತು ಒಳ್ಳೆಯದಾಗಿದೆ” ಎಂದು ಉತ್ತರಕೊಟ್ಟನು.
Kannada BSI Bible 2016
ಆಗ ಹಿಜ್ಕೀಯನು--ಹೇಗೂ ನನ್ನ (ದಿನಗಳಲ್ಲಿ) ಜೀವಮಾನ ದಲ್ಲಿ ಸಮಾಧಾನವು ಸತ್ಯವು ಇರುವವು ಎಂದು ಅಂದುಕೊಂಡು ಯೆಶಾಯ ನಿಗೆ--ನೀನು ಹೇಳಿದ ಕರ್ತನ ವಾಕ್ಯವು ಒಳ್ಳೇದೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೇಗೂ ನನ್ನ ಜೀವಮಾನದಲ್ಲಿ ತಪ್ಪದೆ ಸೌಭಾಗ್ಯವಿರುವದು ಅಂದುಕೊಂಡು ಹಿಜ್ಕೀಯನು ಯೆಶಾಯನಿಗೆ - ನೀನು ತಿಳಿಸಿದ ಯೆಹೋವನ ಮಾತು ಒಳ್ಳೇದಾಗಿದೆ ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಆಗ ರಾಜ ಹಿಜ್ಕೀಯನು ಹೇಗೂ ತನ್ನ ಜೀವಮಾನದಲ್ಲಿ ಶಾಂತಿ ಸೌಭಾಗ್ಯ ಇರುವುದೆಂದು ತಿಳಿದುಕೊಂಡು ಯೆಶಾಯನಿಗೆ, “ನೀನು ತಿಳಿಸಿದ ಸರ್ವೇಶ್ವರ ಸ್ವಾಮಿಯ ಮಾತು ಹಿತಕರವಾದುದು,” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಹಿಜ್ಕೀಯನು, “ಹೇಗೂ ನನ್ನ ಜೀವಮಾನದಲ್ಲಿ ಸಮಾಧಾನವು, ಭದ್ರತೆಯೂ ಇರುವುವು,” ಎಂದುಕೊಂಡು ಯೆಶಾಯನಿಗೆ, “ನೀನು ಹೇಳಿದ ಯೆಹೋವ ದೇವರ ವಾಕ್ಯವು ಒಳ್ಳೆಯದೇ!” ಎಂದನು.