Isaiah 4:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೀವಬಾಧ್ಯರ ಪಟ್ಟಿಯಲ್ಲಿ ಹೆಸರು ಬರೆಯಲ್ಪಟ್ಟು ಚೀಯೋನಿನಲ್ಲಿಯೂ ಜೆರುಸಲೇಮಿನಲ್ಲಿಯೂ ವಾಸಿಸುವವರು ಪರಿಶುದ್ಧರೆಂದು ಕರೆಯಲ್ಪಡುವರು. ಅವರೆಲ್ಲರೂ ಅಲ್ಲಿಯೇ ನೆಲೆಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಮತ್ತು ಯೆರೂಸಲೇಮಿನಲ್ಲಿ ವಾಸಿಸುವರೆಂದು ದಾಖಲೆಗೊಂಡ ಪ್ರತಿಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡುವನು.
Kannada BSI Bible 2016
ಹೀಗಿರುವಲ್ಲಿ ಚೀಯೋನಿನಲ್ಲಿ ಬಿಡಲ್ಪಟ್ಟವರು, ಯೆರೂಸಲೇಮಿನಲ್ಲಿ ಉಳಿದವರು, ಹಾಗೂ ಯೆರೂ ಸಲೇಮಿನಲ್ಲಿ ವಾಸಿಸುವವರೊಳಗೆ ಬರೆದಿರುವ ಪ್ರತಿ ಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡು ವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಚೀಯೋನಿನಲ್ಲಿ ಉಳಿದವರು, ಯೆರೂಸಲೇವಿುನಲ್ಲಿ ನಿಂತವರು, ಅಂತು ಜೀವಬಾಧ್ಯರ ಪಟ್ಟಿಯಲ್ಲಿ ಹೆಸರುಬಿದ್ದ ಯೆರೂಸಲೇವಿುನವರೆಲ್ಲರೂ ದೇವರ ಜನರೆನಿಸಿಕೊಳ್ಳುವರು.
Kannada Bible (KNCL) BSI 2016
ಸಿಯೋನಿನಲ್ಲಿ ಉಳಿದವರು, ಜೆರುಸಲೇಮಿನಲ್ಲಿ ಮಿಕ್ಕವರು - ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿರುವ ಜೆರುಸಲೇಮಿನ ನಿವಾಸಿಗಳೆಲ್ಲರು - ಪವಿತ್ರರೆನಿಸಿಕೊಳ್ಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವಲ್ಲಿ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಹಾಗೂ ಯೆರೂಸಲೇಮಿನಲ್ಲಿ ವಾಸಿಸುವವರೆಂದೂ ದಾಖಲೆಗೊಂಡ ಪ್ರತಿಯೊಬ್ಬರೂ ಪವಿತ್ರರು ಎಂದು ಕರೆಯಲಾಗುವರು.