Isaiah 4:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಹೊದಿಕೆಯು ಸುರಕ್ಷಿತ ಸ್ಥಳದಂತಿರುವದು. ಅದು ಸೂರ್ಯನ ಶಾಖದಿಂದ ಅವರನ್ನು ರಕ್ಷಿಸುವದು. ಅದೇ ಸಮಯದಲ್ಲಿ ಸಣ್ಣ ದೊಡ್ಡ ಮಳೆಗಳಿಂದಲೂ ಆ ಹೊದಿಕೆಯು ರಕ್ಷಿಸುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಹಗಲಿನ ಬಿಸಿಲಿನಲ್ಲಿ ನೆರಳನ್ನೂ, ಸಣ್ಣ ದೊಡ್ಡ ಮಳೆಗಳಲ್ಲಿ ಆಶ್ರಯವನ್ನೂ ಕೊಡುವ ಗುಡಾರವಾಗಿರುವುದು.
Kannada BSI Bible 2016
ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಗಲಿನ ಬಿಸಿಲಲ್ಲಿ ನೆರಳನ್ನೂ ಸಣ್ಣ ದೊಡ್ಡ ಮಳೆಗಳಲ್ಲಿ ಆಶ್ರಯವನ್ನೂ ಕೊಡುವ ಮಂಟಪವಿರುವದು.
Kannada Bible (KNCL) BSI 2016
ಅದು ಹಗಲಿನ ಬಿಸಿಲಲ್ಲಿ ನೆರಳನ್ನೂ ಮಳೆಗಾಳಿ ಬಂದಾಗ ಆಶ್ರಯವನ್ನೂ ಕೊಡುವ ಮಂಟಪವಾಗಿರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ, ಬಿರುಗಾಳಿಗೂ, ಮಳೆಗೂ ಆಶ್ರಯವನ್ನು ಕೊಡುವ ಮಂಟಪವಾಗಿ ಇರುವುದು.