Isaiah 40:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಗೋ, ನನ್ನ ಒಡೆಯನಾದ ಯೆಹೋವನು ಬಲಸಾಮರ್ಥ್ಯಗಳೊಡನೆ ಬರುತ್ತಿದ್ದಾನೆ. ಆತನು ತನ್ನ ಪರಾಕ್ರಮದಿಂದ ಎಲ್ಲಾ ಜನರನ್ನು ಆಳುವನು. ಆತನು ತನ್ನ ಜನರಿಗೆ ಪ್ರತಿಫಲಗಳನ್ನು ತರುವನು. ಅವರ ಸಂಬಳವು ಆತನ ಕೈಯಲ್ಲಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಕರ್ತನಾದ ಯೆಹೋವನು ಶೂರನಾಗಿ ಬರುವನು, ತನ್ನ ಭುಜಬಲದಿಂದಲೇ ಆಳುವನು. ಇಗೋ, ಆತನ ಕ್ರಿಯಾಲಾಭವು ಆತನೊಂದಿಗಿದೆ, ಆತನ ಶ್ರಮದ ಫಲವು ಆತನ ಮುಂದೆಯೇ ಇದೆ.
Kannada BSI Bible 2016
ಇಗೋ, ಕರ್ತನಾದ ದೇವರು ಬಲವುಳ್ಳ ಕೈಯಿಂದ ಬರುತ್ತಾನೆ, ಆತನ ತೋಳು ತನಗೋಸ್ಕರ ಆಳುವದು. ಇಗೋ, ಆತನ ಬಹುಮಾನವು ಆತನ ಸಂಗಡಲೂ ಆತನ ಪ್ರತಿಫಲವು ಆತನ ಮುಂದೆಯೂ ಇದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ಕರ್ತನಾದ ಯೆಹೋವನು ಶೂರನಾಗಿ ಬರುವನು, ತನ್ನ ಭುಜಬಲದಿಂದಲೇ ಆಳುವನು; ಇಗೋ, ಆತನ ಕ್ರಿಯಾಲಾಭವು ಆತನೊಂದಿಗಿದೆ, ಆತನ ಶ್ರಮದ ಫಲವು ಆತನ ಮುಂದಿದೆ.
Kannada Bible (KNCL) BSI 2016
ಇಗೋ, ಬರುತಿಹನು ಸ್ವಾಮಿ ಸರ್ವೇಶ್ವರ ಶೂರನಂತೆ ರಾಜ್ಯವಾಳುವನು ತನ್ನ ಭುಜಬಲದಿಂದಲೇ ಇಗೋ, ಶ್ರಮಕ್ಕೆ ತಕ್ಕ ಪ್ರತಿಫಲ ಆತನ ಕೈಯಲ್ಲಿದೆ ಆತ ಜಯಿಸಿದ ಪರಿವಾರ ಆತನ ಮುಂದಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ಸಾರ್ವಭೌಮ ಯೆಹೋವ ದೇವರು ಬಲದೊಂದಿಗೆ ಬರುವರು. ಅವರ ತೋಳು ತಮಗೋಸ್ಕರ ಆಳುವುದು. ಅವರ ಬಹುಮಾನವು ಅವರ ಸಂಗಡ ಅವರ ಪ್ರತಿಫಲವು ಅವರ ಮುಂದೆಯೂ ಇದೆ.