Isaiah 40:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಯಾರಿಂದಾದರೂ ಸಹಾಯ ಕೇಳಿದನೋ? ಯಾರಾದರೂ ಆತನಿಗೆ ನ್ಯಾಯನೀತಿಯನ್ನು ಕಲಿಸಿದರೋ? ಯಾರಾದರೂ ಆತನಿಗೆ ಜ್ಞಾನವನ್ನು ತಿಳಿಸಿಕೊಟ್ಟರೋ? ಯಾವನಾದರೂ ಯೆಹೋವನಿಗೆ ತಿಳುವಳಿಕೆಯನ್ನು ಹೇಳಿಕೊಟ್ಟನೋ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಯಾರ ಆಲೋಚನೆಯನ್ನು ಕೇಳಿದನು? ಯಾರು ಆತನಿಗೆ ಬುದ್ಧಿಕಲಿಸಿ ಆತನನ್ನು ನ್ಯಾಯಮಾರ್ಗದಲ್ಲಿ ನಡೆಯಿಸಿದನು? ಯಾರು ಆತನಿಗೆ ಜ್ಞಾನವನ್ನು ಬೋಧಿಸಿ ವಿವೇಕ ಮಾರ್ಗವನ್ನು ತೋರಿಸಿದವನು?
Kannada BSI Bible 2016
ಆತನು ಯಾವನ ಆಲೋಚನೆಯನ್ನು ಪಡೆದನು. ಆತನಿಗೆ ಉಪದೇಶಿಸಿದವನೂ ನ್ಯಾಯದ ಹಾದಿ ಯನ್ನು ಕಲಿಸಿ, ತಿಳುವಳಿಕೆಯನ್ನು ಆತನಿಗೆ ಬೋಧಿಸಿ, ವಿವೇಕದ ಮಾರ್ಗವನ್ನು ತಿಳಿಸಿದವನು ಯಾರು?
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಯಾವನ ಆಲೋಚನೆಯನ್ನು ಕೇಳಿದನು? ಯಾವನು ಆತನಿಗೆ ಬುದ್ಧಿಕಲಿಸಿ ಆತನನ್ನು ನ್ಯಾಯಮಾರ್ಗದಲ್ಲಿ ನಡೆಯಿಸಿದನು? ಯಾವನು ಆತನಿಗೆ ಜ್ಞಾನವನ್ನು ಬೋಧಿಸಿ ವಿವೇಕಮಾರ್ಗವನ್ನು ತೋರಿಸಿದನು?
Kannada Bible (KNCL) BSI 2016
ಜ್ಞಾನೋದಯ ನೀಡಿದವನಾರು ಆತನಿಗೆ? ನ್ಯಾಯಮಾರ್ಗ ತೋರಿಸಿದವನಾರು ಆತನಿಗೆ? ಬುದ್ಧಿ ಕಲಿಸಿದವನಾರು ಆತನಿಗೆ? ಏನೇ ಮಾರ್ಗವನ್ನು ಸೂಚಿಸಿದವನಾರು ಆತನಿಗೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನಗೆ ಜ್ಞಾನ ದೊರೆಯಲು ಯೆಹೋವ ದೇವರು ಯಾರ ವಿಚಾರ ತೆಗೆದುಕೊಂಡನು. ಆತನಿಗೆ ಸರಿಯಾದ ಮಾರ್ಗವನ್ನು ಕಲಿಸಿದವನು ಯಾರು? ಆತನಿಗೆ ಜ್ಞಾನವನ್ನು ಕಲಿಸಿದವನಾರು ಇಲ್ಲವೆ ತಿಳುವಳಿಕೆಯ ಮಾರ್ಗವನ್ನು ಆತನಿಗೆ ತೋರಿಸಿದವನಾರು?