Isaiah 40:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಲ್ಲ, ಆದರೆ ಕೆಲವರು ವಿಗ್ರಹಗಳನ್ನು ಕಲ್ಲಿನಿಂದ ಅಥವಾ ಮರದಿಂದ ತಯಾರಿಸುತ್ತಾರೆ. ಅವುಗಳನ್ನು ಅವರು ದೇವರು ಎಂದು ಕರೆಯುತ್ತಾರೆ. ಒಬ್ಬನು ಒಂದು ವಿಗ್ರಹವನ್ನು ಮಾಡುತ್ತಾನೆ. ಇನ್ನೊಬ್ಬನು ಅದಕ್ಕೆ ಬಂಗಾರದ ತಗಡನ್ನು ಹೊದಿಸುತ್ತಾನೆ ಮತ್ತು ಬೆಳ್ಳಿಹಾರವನ್ನು ಮಾಡಿಹಾಕುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವಿಗ್ರಹವಾದರೋ, ಶಿಲ್ಪಿಯು ಅದನ್ನು ಎರಕಹೊಯ್ಯುವನು, ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ, ಬೆಳ್ಳಿಯ ಸರಪಣಿಗಳನ್ನು ಹಾಕುವನು.
Kannada BSI Bible 2016
ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ; ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ; ಬೆಳ್ಳಿಯ ಸರಪಣಿಗಳನ್ನು ಹಾಕುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ವಿಗ್ರಹವಾದರೋ ಶಿಲ್ಪಿಯು ಅದನ್ನು ಎರಕಹೊಯ್ಯುವನು, ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಬಡಿದು ಬೆಳ್ಳಿಯ ಸರಪಣಿಗಳನ್ನು ಮಾಡುವನು.
Kannada Bible (KNCL) BSI 2016
ವಿಗ್ರಹವಾದರೋ ಎರಕ ಹೊಯ್ಯಲ್ಪಟ್ಟಿತು ಶಿಲ್ಪಿಯಿಂದ ಅದಕ್ಕೆ ಬಡಿದಿರುವ ಚಿನ್ನದ ಕವಚ ಅಕ್ಕಸಾಲಿಗನಿಂದ ಅದಕ್ಕೆ ತೊಡಿಸಿರುವ ಬೆಳ್ಳಿಸರಪಣಿ ಆ ವಾಜನಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ. ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ, ಬೆಳ್ಳಿಯ ಸರಪಣಿಗಳನ್ನು ಹಾಕುವನು.