Isaiah 40:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದರ ಪೀಠಕ್ಕಾಗಿ ವಿಶೇಷ ಜಾತಿಯ ಮರವನ್ನು ಆರಿಸುವನು. ಈ ಬಗೆಯ ಮರವು ಕೊಳೆತುಹೋಗುವದಿಲ್ಲ. ಆ ಬಳಿಕ ಅವನು ಒಳ್ಳೆಯ ಬಡಗಿಯನ್ನು ನೇಮಿಸುವನು. ಆ ಬಡಗಿಯು ವಿಗ್ರಹ ನಿಲ್ಲಿಸಿದಾಗ ಅದು ಪಕ್ಕಕ್ಕೆ ವಾಲಿ ಬೀಳದಂತೆ ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
(ಇಂಥದನ್ನು ದೇವರಿಗೆ) ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳಲಾರದ ಬಡವನು, ಹುಳಿತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ಮಾಡಿಸಲು ಶಿಲ್ಪಿಯನ್ನು ವಿಚಾರಿಸಿಕೊಳ್ಳುವನು.
Kannada BSI Bible 2016
ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳ ಲಾರದ ಬಡವನು ಹುಳುತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ತಯಾರಿಸುವದಕ್ಕೆ ಕುಯುಕ್ತಿಯ ಕೆಲಸಗಾರರನ್ನು ವಿಚಾರಿಸಿಕೊಳ್ಳುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
[ಇಂಥದನ್ನು ದೇವರಿಗೆ] ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳಲಾರದ ಬಡವನು ಹುಳಿತುಹೋಗದ ಮರವನ್ನು ಹುಡುಕಿ ಅಲುಗದ ವಿಗ್ರಹವನ್ನು ಮಾಡಿಸಲು ಕುಶಲನನ್ನು ವಿಚಾರಿಸಿಕೊಳ್ಳುವನು.
Kannada Bible (KNCL) BSI 2016
ಇಷ್ಟು ಹಣವನ್ನು ವೆಚ್ಚ ಮಾಡಲಾಗದ ಬಡವನು ಹುಡುಕುವನು ಹುಳಿತುಹೋಗದ ಮರವನು ಬಾಗಿ ಬೀಳದ ವಿಗ್ರಹವನ್ನು ಮಾಡಬಲ್ಲಾ ಕುಶಲನನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳಲಾರದ ಬಡವನು ಹುಳಿತುಹೋಗದ ಮರವನ್ನು ಹುಡುಕಿ, ಬಾಗಿಬೀಳದ ವಿಗ್ರಹವನ್ನು ತಯಾರಿಸುವುದಕ್ಕೆ ಶಿಲ್ಪಿಯನ್ನು ವಿಚಾರಿಸಿಕೊಳ್ಳುವನು.