Isaiah 40:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಸತ್ಯವಾದ ದೇವರು. ಆತನು ಉನ್ನತವಾದ ಆಕಾಶದಲ್ಲಿ ಕುಳಿತುಕೊಳ್ಳುವನು. ಆತನಿಗೆ ಹೋಲಿಸಿದರೆ ಜನರು ಪ್ರಿಯತಮತೆಗಳಂತಿರುವರು. ಆತನು ಬಟ್ಟೆಯಂತೆ ಆಕಾಶಮಂಡಲವನ್ನು ಸುರುಳಿಯಾಗಿ ಸುತ್ತುವನು. ಆಕಾಶಮಂಡಲವನ್ನು ಆತನು ಎಳೆದು ಗುಡಾರದಂತೆ ಅಗಲಮಾಡಿ ಅದರಡಿಯಲ್ಲಿ ಕುಳಿತುಕೊಳ್ಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭೂಮಂಡಲ ನಿವಾಸಿಗಳು ಮಿಡತೆಗಳಂತೆ ಸಣ್ಣಗೆ ಕಾಣಿಸುವಷ್ಟು ಉನ್ನತವಾದ ಆಕಾಶದಲ್ಲಿ ಆತನು ಆಸೀನನಾಗಿದ್ದಾನೆ; ಆಕಾಶಮಂಡಲವನ್ನು ನಾರುಬಟ್ಟೆಯಂತೆ ಹರಡಿ ನಿವಾಸದ ಗುಡಾರದಂತೆ ಎತ್ತಿ ಕಟ್ಟಿದ್ದಾನೆ.
Kannada BSI Bible 2016
ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಭೂಮಂಡಲನಿವಾಸಿಗಳು ವಿುಡತೆಗಳಂತೆ ಸಣ್ಣಗೆ ಕಾಣಿಸುವಷ್ಟು ಉನ್ನತವಾದ ಆಕಾಶದಲ್ಲಿ ಆತನು ಆಸೀನನಾಗಿದ್ದಾನೆ; ಆಕಾಶಮಂಡಲವನ್ನು ನವರುಬಟ್ಟೆಯಂತೆ ಹರಡಿ ನಿವಾಸದ ಗುಡಾರದಂತೆ ಎತ್ತಿಕಟ್ಟಿದ್ದಾನೆ.
Kannada Bible (KNCL) BSI 2016
ಆಸೀನನಾಗಿಹನು ಆತ ಭೂಮಂಡಲಕ್ಕಿಂತ ಮೇಲೆ ಭೂನಿವಾಸಿಗಳು ಕಾಣುತಿಹರು ಆತನಿಗೆ ಮಿಡತೆಗಳಂತೆ ಹರಡಿಹನು ಆಕಾಶಮಂಡಲವನು ನವಿರು ಬಟ್ಟೆಯಂತೆ ಮೇಲೆತ್ತಿಕಟ್ಟಿಹನು ಅದನ್ನು ನಿವಾಸದ ಗುಡಾರದಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕಾಶಮಂಡಲವನ್ನು ತೆರೆಯಂತೆ ವಿಸ್ತರಿಸಿ, ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ, ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.