Isaiah 40:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಕಾಶಮಂಡಲದ ಕಡೆಗೆ ನೋಡಿರಿ! ಆ ನಕ್ಷತ್ರಗಳನ್ನೆಲ್ಲಾ ಮಾಡಿದವರು ಯಾರು? ಆಕಾಶದಲ್ಲಿರುವ ಆ “ಸೈನ್ಯಗಳನ್ನು” ಸಿದ್ಧ ಮಾಡಿದವರು ಯಾರು? ಪ್ರತಿಯೊಂದು ನಕ್ಷತ್ರವನ್ನು ಹೆಸರೆತ್ತಿ ಕರೆಯುವವರು ಯಾರು? ಆತನು ಬಲಿಷ್ಠನೂ ಪರಾಕ್ರಮಶಾಲಿಯೂ ಆಗಿದ್ದಾನೆ. ಆದ್ದರಿಂದ ಆ ನಕ್ಷತ್ರಗಳಲ್ಲಿ ಒಂದೂ ನಾಶವಾಗಲಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ! ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಈ ಸೈನ್ಯವನ್ನು ಲೆಕ್ಕಕ್ಕೆ ಸರಿಯಾಗಿ ಮುಂದುವರಿಸುತ್ತಾನೆ. ಎಲ್ಲವನ್ನೂ ಹೆಸರೆತ್ತಿ ಕರೆಯುತ್ತಾನೆ; ಆತನು ಅತಿ ಬಲಾಢ್ಯನೂ, ಮಹಾಶಕ್ತನೂ ಆಗಿರುವುದರಿಂದ ಅವುಗಳೊಳಗೆ ಒಂದೂ ಕಡಿಮೆಯಾಗದು.
Kannada BSI Bible 2016
ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ; ಇಗೋ, ಇವುಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ ಅವುಗಳ ಸೈನ್ಯವನ್ನೆಲ್ಲಾ ಲೆಕ್ಕಮಾಡಿ ಹೊರಗೆ ತರು ವನು. ಆತನು ಅತಿ ಬಲಾಢ್ಯನಾಗಿರುವದರಿಂದ ಅವುಗಳೊಳಗೆ ಒಂದೂ ತಪ್ಪದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿಕೊಂಡು ನೋಡಿರಿ! ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಈ ಸೈನ್ಯವನ್ನು ಲೆಕ್ಕಕ್ಕೆ ಸರಿಯಾಗಿ ಮುಂದರಿಸುತ್ತಾನಲ್ಲಾ; ಎಲ್ಲವನ್ನೂ ಹೆಸರೆತ್ತಿ ಕರೆಯುತ್ತಾನೆ; ಆತನು ಅತಿ ಬಲಾಢ್ಯನೂ ಮಹಾಶಕ್ತನೂ ಆಗಿರುವದರಿಂದ ಅವುಗಳೊಳಗೆ ಒಂದೂ ಕಡಿಮೆಯಾಗದು.
Kannada Bible (KNCL) BSI 2016
ಕಣ್ಣೆತ್ತಿ, ದಿಟ್ಟಿಸಿನೋಡಿ ಆಕಾಶದತ್ತ ಯಾರು ಆ ತಾರೆಗಳನ್ನು ರಚಿಸಿದಾತ? ಆ ತಾರಾ ಸಮೂಹವನ್ನು ಕ್ರಮಾನುಸಾರ ನಡೆಸುವಾತ, ಒಂದೊಂದನ್ನೂ ಹೆಸರಿಟ್ಟು ಕರೆಯುವಾತ, ಅವುಗಳಲ್ಲಿ ಒಂದನ್ನೂ ಕಾಣೆಯಾಗಲು ಬಿಡದಾತ, ಅಷ್ಟು ಬಲಾಢ್ಯನು, ಶಕ್ತಿವಂತನು ಆತ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ. ಇಗೋ, ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ, ಅವುಗಳ ಸೈನ್ಯವನ್ನೆಲ್ಲಾ ಲೆಕ್ಕ ಮಾಡಿ ಹೊರಗೆ ತರುವನು. ಏಕೆಂದರೆ ಆತನು ಅತಿ ಬಲಾಢ್ಯನೂ ಮಹಾಶಕ್ತನೂ ಆಗಿರುವುದರಿಂದ ಅವುಗಳೊಳಗೆ ಒಂದೂ ತಪ್ಪದು.