Isaiah 40:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೋಬೇ, ಇದು ಸತ್ಯ! ಇಸ್ರೇಲೇ, ನೀನದನ್ನು ನಂಬಬೇಕು. ಹೀಗಿರಲು ನೀನು, “ಯೆಹೋವನು ನನ್ನ ನಡತೆಯನ್ನು ಗಮನಿಸುವದಿಲ್ಲ. ನನ್ನನ್ನು ಕಂಡುಹಿಡಿದು ಶಿಕ್ಷಿಸುವದಿಲ್ಲ” ಎಂದು ಹೇಳುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬೇ, ಇಸ್ರಾಯೇಲೇ, “ನನ್ನ ಮಾರ್ಗವು ಯೆಹೋವನಿಗೆ ಮರೆಯಾಗಿದೆ, ನನಗೆ ಸಿಕ್ಕಬೇಕಾದ ನ್ಯಾಯವು ನನ್ನ ದೇವರ ಲಕ್ಷ್ಯಕ್ಕೆ ಬಿದ್ದಿಲ್ಲವಲ್ಲಾ” ಎಂದು ಏಕೆ ಅಂದುಕೊಳ್ಳುತ್ತೀ?
Kannada BSI Bible 2016
ನನ್ನ ಮಾರ್ಗವು ಕರ್ತನಿಗೆ ಮರೆಯಾಗಿದೆ ಮತ್ತು ನನ್ನ ನ್ಯಾಯವು ನನ್ನ ದೇವರಿಂದ ದಾಟಿ ಹೋಯಿ ತಲ್ಲಾ! ಎಂದು ಯಾಕೋಬೇ ಯಾಕೆ ಹೇಳುತ್ತಿ? ಇಸ್ರಾಯೇಲೇ ಯಾಕೆ ಮಾತಾಡುತ್ತಿ?
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬೇ, ಇಸ್ರಾಯೇಲೇ, ನನ್ನ ಮಾರ್ಗವು ಯೆಹೋವನಿಗೆ ಮರೆಯಾಗಿದೆ, ನನಗೆ ಸಿಕ್ಕಬೇಕಾದ ನ್ಯಾಯವು ನನ್ನ ದೇವರ ಲಕ್ಷ್ಯಕ್ಕೆ ಬಿದ್ದಿಲ್ಲವಲ್ಲಾ ಎಂದು ಏಕೆ ಅಂದುಕೊಳ್ಳುತ್ತೀ?
Kannada Bible (KNCL) BSI 2016
ಹೀಗಿರಲು ಎಲೈ ಯಕೋಬ್ಯರೇ, ಇಸ್ರಯೇಲರೇ, ‘ಮರೆಯಾಗಿದೆ ಪ್ರಭುವಿಗೆ ನನ್ನ ಕುಂದುಕೊರತೆ, ನ್ಯಾಯನೀತಿ ದೊರಕದಿದೆ ನನಗೆ ಇದರತ್ತ ದೇವರ ಲಕ್ಷ್ಯಬೀಳದಿದೆ’ ಎನ್ನುತ್ತಿರುವಿರಿ ಏಕೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಮಾರ್ಗವು ಯೆಹೋವ ದೇವರಿಗೆ ಮರೆಯಾಗಿದೆ. ನನ್ನ ನ್ಯಾಯವು ನನ್ನ ದೇವರಿಂದ ದಾಟಿಹೋಯಿತಲ್ಲಾ! ಎಂದು ಯಾಕೋಬೇ ಏಕೆ ಹೇಳುತ್ತೀ? ಇಸ್ರಾಯೇಲೇ ಏಕೆ ಮಾತನಾಡುತ್ತೀ?