Isaiah 40:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಬ್ಬ ಮನುಷ್ಯನು ಕೂಗಿಹೇಳುವುದನ್ನು ಕೇಳಿರಿ: “ಯೆಹೋವನಿಗೆ ಅಡವಿಯಲ್ಲಿ ದಾರಿಯನ್ನು ಸಿದ್ಧಮಾಡಿರಿ! ನಮ್ಮ ದೇವರಿಗೆ ಅಲ್ಲಿ ಮಾರ್ಗವನ್ನು ನೆಟ್ಟಗೆಮಾಡಿರಿ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ ಒಂದು ವಾಣಿ! “ಅರಣ್ಯದಲ್ಲಿ ಯೆಹೋವನ ದಾರಿಯನ್ನು ಸರಿಪಡಿಸಿರಿ, ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಿಪಡಿಸಿರಿ”
Kannada BSI Bible 2016
ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ ಒಂದು ವಾಣಿ! - ಅರಣ್ಯದಲ್ಲಿ ಯೆಹೋವನ ದಾರಿಯನ್ನು ಸರಿಪಡಿಸಿರಿ, ಅಡವಿಯಲ್ಲಿ ನಮ್ಮ ದೇವರಿಗೆ ರಾಜ ಮಾರ್ಗವನ್ನು ನೆಟ್ಟಗೆ ಮಾಡಿರಿ;
Kannada Bible (KNCL) BSI 2016
ಇಗೋ, ಈ ವಾಣಿಯನ್ನು ಕೇಳಿ: “ಸರ್ವೇಶ್ವರ ಸ್ವಾಮಿಗೆ ಮಾರ್ಗವನ್ನು ಸಿದ್ಧಮಾಡಿ ಅರಣ್ಯದಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಾಗಮಾಡಿ ಅಡವಿಯಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮರುಭೂಮಿಯಲ್ಲಿ ಯೆಹೋವ ದೇವರ ಮಾರ್ಗವನ್ನು ಸಿದ್ಧಮಾಡಿರಿ. ಅರಣ್ಯದಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆಮಾಡಿರಿ.