Isaiah 40:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಂದು ಸ್ವರವು “ಮಾತನಾಡು” ಎಂದಿತು. ಅದಕ್ಕೆ ಮನುಷ್ಯನು, “ಏನು ಮಾತಾಡಲಿ” ಅಂದನು. ಆಗ ಸ್ವರವು, “ಜನರು ಶಾಶ್ವತವಾಗಿ ಜೀವಿಸುವದಿಲ್ಲ, ಅವರೆಲ್ಲರೂ ಹುಲ್ಲಿನಂತಿದ್ದಾರೆ. ಅವರ ಒಳ್ಳೆಯತನವು ಕಾಡುಹೂವಿನಂತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ವಾಣಿಯು ಮತ್ತೆ ಕೇಳಿಸಿ, “ಕೂಗು ಎನ್ನುತ್ತದೆ” ಅದಕ್ಕೆ ನಾನು, “ಏನು ಕೂಗಲಿ?” ಎಂದು ಕೇಳಲು, “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಲಾವಣ್ಯವೆಲ್ಲಾ ಅಡವಿಯ ಹೂವಿನಂತಿದೆ.
Kannada BSI Bible 2016
ವಾಣಿಯು ಕೂಗು ಅನ್ನುತ್ತದೆ. ಅವನು--ನಾನು ಏನು ಕೂಗಲಿ ಅನ್ನಲು ಎಲ್ಲಾ ನರಮನುಷ್ಯರು ಹುಲ್ಲಿನ ಹಾಗಿದ್ದಾರೆ. ಕರ್ತನ ಶ್ವಾಸವು ಅವರ ಮೇಲೆ ಬೀಸುವದರಿಂದ ಅವರ ಲಾವಣ್ಯವೆಲ್ಲಾ ಹೊಲದ ಹೂವಿನಂತಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ವಾಣಿಯು ಮತ್ತೆ ಕೇಳಿಸಿ - ಕೂಗು ಎನ್ನುತ್ತದೆ. ಅದಕ್ಕೆ ನಾನು - ಏನು ಕೂಗಲಿ ಎಂದು ಕೇಳಲು ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಲಾವಣ್ಯವೆಲ್ಲಾ ಅಡವಿಯ ಹೂವಿನಂತಿದೆ.
Kannada Bible (KNCL) BSI 2016
ಆ ವಾಣಿ ಮತ್ತೆ ಕೇಳಿಸಿತು: ‘ಗಟ್ಟಿಯಾಗಿ ಕೂಗು’ ಎಂದಿತು ನಾನೇನೆಂದು ಕೂಗಲಿ ಎನ್ನಲು ಈ ಪರಿಯಾಗಿ ಉತ್ತರಿಸಿತು: “ನರಮಾನವರೆಲ್ಲ ಬರೀ ಹುಲ್ಲಿನಂತೆ ಅವರ ಸೊಬಗೆಲ್ಲಾ ಬಯಲಿನ ಕುಸುಮದಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವಾಣಿಯು, “ಗಟ್ಟಿಯಾಗಿ ಕೂಗು,” ಎಂದಿತು. ಅದಕ್ಕೆ, “ನಾನು ಏನೆಂದು ಕೂಗಲಿ?” ಎಂದು ಕೇಳಲು, “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅವರ ಸೊಬಗೆಲ್ಲಾ ಹೊಲದ ಹೂವಿನಂತಿದೆ,