Isaiah 40:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನ ಕಡೆಯಿಂದ ಒಂದು ಬಲವಾದ ಗಾಳಿಯು ಹುಲ್ಲಿನ ಮೇಲೆ ಬೀಸಿತು. ಆ ಹುಲ್ಲು ಒಣಗಿಹೋಯಿತು. ಕಾಡಿನ ಪುಷ್ಪವು ಬಾಡಿಹೋಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಶ್ವಾಸವು ಅದರ ಮೇಲೆ ಬೀಸುವುದರಿಂದ ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು. ನಿಶ್ಚಯವಾಗಿ ಜನರು ಹುಲ್ಲೇ ಹುಲ್ಲು!
Kannada BSI Bible 2016
ಹುಲ್ಲು ಒಣಗಿ ಹೋಗು ವದು ಹೂವು ಬಾಡಿಹೋಗುವದು. ಕರ್ತನ ಆತ್ಮ ಅವುಗಳ ಮೇಲೆ ಊದುವನು; ನಿಶ್ಚಯವಾಗಿ ಜನರು ಹುಲ್ಲೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಶ್ವಾಸವು ಅದರ ಮೇಲೆ ಬೀಸುವದರಿಂದ ಹುಲ್ಲು ಒಣಗಿಹೋಗುವದು, ಹೂವು ಬಾಡಿ ಹೋಗುವದು. ಜನವು ಹುಲ್ಲೇ ಹುಲ್ಲು!
Kannada Bible (KNCL) BSI 2016
ಪ್ರಭುವಿನ ಶ್ವಾಸ ಬೀಸಲು ಒಣಗಿ ಹೋಗುವುದಾ ಹುಲ್ಲು ಬಾಡಿ ಹೋಗುವುದಾ ಹೂವು ಮಾನವರೆಲ್ಲ ಹುಲ್ಲೇ ಹುಲ್ಲು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಶ್ವಾಸವು ಅದರ ಮೇಲೆ ಬೀಸುವುದರಿಂದ, ಹುಲ್ಲು ಒಣಗಿಹೋಗುವುದು. ಹೂವು ಉದುರಿ ಹೋಗುವುದು. ಮಾನವರೆಲ್ಲರೂ ಹುಲ್ಲೇ ಆಗಿದ್ದಾರೆ.