Isaiah 40:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಚೀಯೋನೇ, ಸಾರಿ ತಿಳಿಸಲು ನಿನಗೆ ಒಂದು ಶುಭವಾರ್ತೆಯಿದೆ. ಉನ್ನತ ಪರ್ವತಕ್ಕೆ ಏರಿಹೋಗಿ ಶುಭವಾರ್ತೆಯನ್ನು ಗಟ್ಟಿಯಾಗಿ ಸಾರು! ಜೆರುಸಲೇಮೇ, ನಿನಗೆ ತಿಳಿಸಲು ಒಳ್ಳೆಯ ವಾರ್ತೆ ಇದೆ. ಹೆದರಬೇಡ. ಅದನ್ನು ಗಟ್ಟಿಯಾಗಿ ಸಾರು. ಯೆಹೂದದ ಎಲ್ಲಾ ನಗರಗಳಲ್ಲಿ ತಿಳಿಸು: “ಇಗೋ! ನಿನ್ನ ದೇವರು ಇಲ್ಲಿದ್ದಾನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ, ಯೆಹೂದದ ಪಟ್ಟಣಗಳಿಗೆ, “ಇಗೋ, ನಿಮ್ಮ ದೇವರು!
Kannada BSI Bible 2016
ಶುಭಸಮಾಚಾರವನ್ನು ತಿಳಿಸುವ ಓ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಶುಭಸಮಾ ಚಾರವನ್ನು ತಿಳಿಸುವ ಓ ಯೆರೂಸಲೇಮೇ, ಬಲವಾಗಿ ನಿನ್ನ ಸ್ವರವನ್ನು ಎತ್ತು, ಭಯಪಡದೆ ಎತ್ತು; ಯೆಹೂದದ ಪಟ್ಟಣಗಳಿಗೆ ಇಗೋ, ನಿನ್ನ ದೇವರು ಎಂದು ಹೇಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, ಉನ್ನತಪರ್ವತವನ್ನು ಹತ್ತಿಕೋ; ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ, ಯೆಹೂದದ ಪಟ್ಟಣಗಳಿಗೆ - ಇಗೋ, ನಿಮ್ಮ ದೇವರು!
Kannada Bible (KNCL) BSI 2016
ಪರ್ವತವನ್ನೇರು ಶುಭಸಂದೇಶಕಳಾದ ಸಿಯೋನೇ, ಧ್ವನಿಯೇರಿಸು, ಶುಭವಾರ್ತೆ ಸಾರಬಲ್ಲ ಜೆರುಸಲೇಮೇ, ಧ್ವನಿಯೇರಿಸು, ನಿರ್ಭಯದಿಂದ ಏರಿಸು ‘ಇಗೋ, ನಿಮ್ಮ ದೇವರು’ ಎಂದು ಜೂದ ನಗರಗಳಿಗೆ ಸಾರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶುಭಸಮಾಚಾರವನ್ನು ತಿಳಿಸುವ ಚೀಯೋನೇ, ನೀನು ಉನ್ನತ ಪರ್ವತವನ್ನು ಏರು. ಶುಭಸಮಾಚಾರವನ್ನು ತಿಳಿಸುವ ಯೆರೂಸಲೇಮೇ, ಬಲವಾಗಿ ನಿನ್ನ ಧ್ವನಿ ಎತ್ತು, ಭಯಪಡಬೇಡ. ಯೆಹೂದದ ಪಟ್ಟಣಗಳಿಗೆ, “ಇಗೋ, ನಿನ್ನ ದೇವರು!” ಎಂದು ಹೇಳು.