Isaiah 41:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಹೇಳುವುದೇನೆಂದರೆ: “ ಬಹು ದೂರದಲ್ಲಿರುವ ಜನಾಂಗಗಳವರೇ, ಮೌನವಾಗಿದ್ದು ನನ್ನ ಬಳಿಗೆ ಬನ್ನಿರಿ. ಜನಾಂಗಗಳೇ, ಮತ್ತೆ ಬಲಿಷ್ಠರಾಗಿರಿ. ನನ್ನ ಬಳಿಗೆ ಬಂದು ನನ್ನೊಂದಿಗೆ ಮಾತಾಡಿರಿ. ನಾವು ಒಟ್ಟಾಗಿ ಸೇರಿಬಂದು ಯಾರು ಸರಿ ಎಂದು ವಾದಿಸೋಣ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದ್ವೀಪನಿವಾಸಿಗಳೇ, ನನ್ನ ಕಡೆಗೆ ತಿರುಗಿ ಮೌನದಿಂದಿರಿ. ಜನಾಂಗಗಳು ತಮ್ಮನ್ನು ಬಲಪಡಿಸಿಕೊಳ್ಳಲಿ; ಸಮೀಪಕ್ಕೆ ಬಂದು ಮಾತನಾಡಲಿ. ನ್ಯಾಯಸ್ಥಾನಕ್ಕೆ ಒಟ್ಟಿಗೆ ಹೋಗೋಣ.
Kannada BSI Bible 2016
ಓ ದ್ವೀಪನಿವಾಸಿಗಳೇ, ನನ್ನ ಮುಂದೆ ಮೌನದಿಂದಿರ್ರಿ; ಜನಗಳು ಹೊಸ ಬಲ ವನ್ನು ಹೊಂದಿಕೊಳ್ಳಲಿ; ಅವರು ನನ್ನ ಸವಿಾಪಕ್ಕೆ ಬಂದು ಮಾತಾಡಲಿ; ನ್ಯಾಯತೀರ್ಪಿಗಾಗಿ ಸವಿಾಪಕ್ಕೆ ಒಟ್ಟಾಗಿ ಬರೋಣ.
Kannada BSI JV (ಕನ್ನಡ ಸತ್ಯವೇದವು J.V. (BSI))
ದ್ವೀಪನಿವಾಸಿಗಳೇ, ನನ್ನ ಕಡೆಗೆ ತಿರುಗಿ ಮೌನದಿಂದಿರಿ; ಜನಾಂಗಗಳು [ಎಷ್ಟಾದರೂ] ತಮ್ಮನ್ನು ಬಲಪಡಿಸಿಕೊಳ್ಳಲಿ; ಸಮೀಪಕ್ಕೆ ಬಂದು ಮಾತಾಡಲಿ; ನ್ಯಾಯಸ್ಥಾನಕ್ಕೆ ಒಟ್ಟಿಗೆ ಹೋಗುವ.
Kannada Bible (KNCL) BSI 2016
ದೂರದೇಶದವರೇ, ಮೌನದಿಂದ ನನಗೆ ಕಿವಿಗೊಡಿ; ರಾಷ್ಟ್ರಗಳು ಎಷ್ಟೇ ಬಲಿಷ್ಠರಾಗಿರಲಿ ಬಂದು ಮಾತಾಡಲಿ ಸಮೀಪದಲಿ. ಒಟ್ಟಿಗೆ ಸೇರೋಣ ನ್ಯಾಯಸ್ಥಾನದಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದ್ವೀಪಗಳೇ, ನನ್ನ ಮುಂದೆ ಮೌನದಿಂದಿರಿ. ರಾಷ್ಟ್ರಗಳು ತಮ್ಮ ಬಲವನ್ನು ನವೀಕರಿಸಲಿ! ಅವರು ನನ್ನ ಸಮೀಪಕ್ಕೆ ಬಂದು ಮಾತನಾಡಲಿ. ನ್ಯಾಯಸ್ಥಾನಕ್ಕೆ ಸಮೀಪಕ್ಕೆ ಒಟ್ಟಾಗಿ ಬರೋಣ.