Isaiah 41:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ದೇವರಾದ ಯೆಹೋವನು ನಾನೇ. ನಾನು ನಿನ್ನ ಬಲಗೈಯನ್ನು ಹಿಡಿದಿದ್ದೇನೆ. ‘ನೀನು ಹೆದರಬೇಡ, ನಾನೇ ನಿನಗೆ ಸಹಾಯ ಮಾಡುತ್ತೇನೆ’ ಎಂದು ಹೇಳುತ್ತಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಯೆಹೋವನೆಂಬ ನಾನೇ ನಿನ್ನ ಕೈಹಿಡಿಯುತ್ತೇನೆ. “ಭಯಪಡಬೇಡ, ನಿನಗೆ ಸಹಾಯಮಾಡುತ್ತೇನೆ.
Kannada BSI Bible 2016
ನಿನಗೆ ಸಹಾಯ ಮಾಡುತ್ತೇನೆಂದು ನಿನಗೆ ಹೇಳುವ ಕರ್ತನೂ ನಿನ್ನ ದೇವರೂ ಆಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಭಯಪಡಬೇಡ, ನಾನೇ ನಿನಗೆ ಸಹಾಯಮಾಡುತ್ತೇನೆ ಎಂದು ನಿನಗೆ ಹೇಳುವ ನಿನ್ನ ದೇವರಾದ ಯೆಹೋವನೆಂಬ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ.
Kannada Bible (KNCL) BSI 2016
ನಿನ್ನ ದೇವರಾದ ಸರ್ವೇಶ್ವರ ನಾನೇ ಭಯಪಡಬೇಡ, ನಿನಗೆ ನಾನೇ ನೆರವಾಗುವೆ ಎಂತಲೇ, ನಿನ್ನ ಕೈ ಹಿಡಿದುಕೊಳ್ಳುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನಂತೂ ಹೆದರಬೇಡ; ಏಕೆಂದರೆ ಯೆಹೋವ ದೇವರಾದ ನಾನೇ ನಿನಗೆ ಸಹಾಯ ಮಾಡುತ್ತೇನೆ, ನಿನ್ನ ದೇವರಾಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ!