Isaiah 41:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನಗೆ ಅಮೂಲ್ಯವಾದ ಯಾಕೋಬೇ, ಭಯಪಡಬೇಡ. ನನ್ನ ಪ್ರಿಯ ಇಸ್ರೇಲೇ, ಹೆದರಬೇಡ. ನಾನು ನಿಜವಾಗಿಯೂ ನಿನಗೆ ಸಹಾಯ ಮಾಡುತ್ತೇನೆ.” ಇದು ಯೆಹೋವನ ನುಡಿ. “ಇಸ್ರೇಲರ ಪರಿಶುದ್ಧನೂ ನಿನ್ನನ್ನು ರಕ್ಷಿಸುವಾತನೂ ಈ ಮಾತುಗಳನ್ನು ಹೇಳಿದ್ದಾನೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ.
Kannada BSI Bible 2016
ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್‌ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
Kannada BSI JV (ಕನ್ನಡ ಸತ್ಯವೇದವು J.V. (BSI))
ಕ್ರಿವಿುಪ್ರಾಯವಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾವಿುಯು ನಿನಗೆ ವಿಮೋಚಕನು ಎಂದು ಯೆಹೋವನು ಅನ್ನುತ್ತಾನೆ.
Kannada Bible (KNCL) BSI 2016
ಸರ್ವೇಶ್ವರ ಇಂತೆನ್ನುತ್ತಾರೆ: “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹುಳುವಿನಂತಿರುವ ಯಾಕೋಬೇ, ಪುಟ್ಟ ಇಸ್ರಾಯೇಲೇ, ಭಯಪಡಬೇಡ. ನಾನೇ ನಿನಗೆ ಸಹಾಯ ಮಾಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾರಲ್ಲಾ!