Isaiah 41:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಗೋ, ನಾನು ನಿನ್ನನ್ನು ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ. ಅದಕ್ಕೆ ಅನೇಕ ಹರಿತವಾದ ಹಲ್ಲುಗಳಿವೆ. ಬೇಸಾಯಗಾರರು ಧಾನ್ಯವನ್ನು ಹುಲ್ಲಿನಿಂದ ಪ್ರತ್ಯೇಕಿಸುವದಕ್ಕಾಗಿ ಅದನ್ನು ಉಪಯೋಗಿಸುವರು. ನೀವು ಬೆಟ್ಟದ ಶಿಖರಗಳಲ್ಲಿ ತುಳಿದಾಡಿ ಅದನ್ನು ಪುಡಿ ಮಾಡುವಿರಿ. ಆ ಬೆಟ್ಟಗಳನ್ನು ನೀವು ಕುಂಟೆಯಂತೆ ಮಾಡುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಗೋ, ನಾನು ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ, ನೀನು ಬೆಟ್ಟಗಳನ್ನು ಒಡೆದು ಪುಡಿಪುಡಿಮಾಡಿ ಗುಡ್ಡಗಳನ್ನು ಹೊಟ್ಟು ಮಾಡುವಿ.
Kannada BSI Bible 2016
ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನಾನು ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ, ನೀನು ಬೆಟ್ಟಗಳನ್ನು ಒಕ್ಕುತ್ತಾ ಪುಡಿಪುಡಿಗೈದು ಗುಡ್ಡಗಳನ್ನು ಹೊಟ್ಟುಮಾಡುವಿ.
Kannada Bible (KNCL) BSI 2016
ಮಾಡಿರುವೆ ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಕುಂಟೆಯಂತೆ. ನೀನು ಒಕ್ಕುತ್ತಾ ಪುಡಿಪುಡಿ ಮಾಡುವೆ ಬೆಟ್ಟಗಳನೆ ಹೊಟ್ಟು ಧೂಳಾಗಿಸುವೆ ಗುಡ್ಡಗಳನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ನಿನ್ನನ್ನು ಹದವಾದ, ಹೊಸ ಮೊನೆಹಲ್ಲಿನ ಹಂತೀಕುಂಟೆಯನ್ನಾಗಿ ಮಾಡುವೆನು. ನೀನು ಬೆಟ್ಟಗಳನ್ನು ಹೊಕ್ಕು, ಪುಡಿಪುಡಿಮಾಡಿ, ಗುಡ್ಡಗಳನ್ನು ಹೊಟ್ಟಿನಂತೆ ಮಾಡುವೆ.