Isaiah 41:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಡಜನರು ನೀರಿಗಾಗಿ ಹುಡುಕಾಡುವರು. ಆದರೆ ನೀರು ಅವರಿಗೆ ದೊರಕುವದಿಲ್ಲ. ಅವರು ದಾಹಗೊಂಡಿದ್ದಾರೆ, ಅವರ ನಾಲಿಗೆ ಒಣಗಿಹೋಗಿದೆ. ನಾನು ಅವರ ಮೊರೆಯನ್ನು ಕೇಳುವೆನು. ನಾನು ಅವರನ್ನು ತೊರೆಯುವುದಿಲ್ಲ, ಅವರನ್ನು ಸಾಯಲು ಬಿಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು.
Kannada BSI Bible 2016
ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ ಕರ್ತನಾದ ನಾನೇ ಅವರನ್ನು ಅಲೈಸುವೆನು, ಇಸ್ರಾಯೇಲ್‌ ದೇವ ರಾಗಿರುವ ನಾನು ಅವರನ್ನು ಕೈಬಿಡೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು.
Kannada Bible (KNCL) BSI 2016
ದೀನದರಿದ್ರರು ನೀರಿಗಾಗಿ ಪರದಾಡುವಾಗ ಬಾಯಾರಿ ಅವರ ನಾಲಿಗೆ ಒಣಗಿಹೋದಾಗ ಪ್ರಸನ್ನನಾಗುವೆ ಸರ್ವೇಶ್ವರನಾದ ನಾನೇ. ಇಸ್ರಯೇಲಿನ ದೇವರಾದ ನಾನವರನ್ನು ಕೈಬಿಡುವೆನೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ, ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ, ಯೆಹೋವನಾದ ನಾನೇ ಅವರಿಗೆ ಉತ್ತರಕೊಡುವೆನು. ಇಸ್ರಾಯೇಲ್ ದೇವರಾಗಿರುವ ನಾನು ಅವರನ್ನು ಕೈಬಿಡೆನು.