Isaiah 41:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಣಬೆಟ್ಟಗಳಲ್ಲಿ ನದಿಗಳು ಹರಿಯುವಂತೆ ನಾನು ಮಾಡುವೆನು. ಕಣಿವೆಗಳ ಮೂಲಕ ಬುಗ್ಗೆಯ ನೀರು ಹರಿಯುವಂತೆ ಮಾಡುವೆನು. ಮರುಭೂಮಿಯನ್ನು ಸರೋವರವನ್ನಾಗಿ ಮಾಡುವೆನು. ಆ ಒಣನೆಲದಲ್ಲಿ ನೀರಿನ ಬುಗ್ಗೆಗಳು ಕಾಣುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೋಳುಗುಡ್ಡಗಳಲ್ಲಿ ನದಿಗಳನ್ನು, ಕಣಿವೆಗಳಲ್ಲಿ ಒರತೆಗಳನ್ನು ಹೊರಡಿಸಿ, ಅರಣ್ಯವನ್ನು ಕೆರೆಯಾಗಿಯೂ, ಮರುಭೂಮಿಯನ್ನು ಬುಗ್ಗೆಗಳನ್ನಾಗಿಯೂ ಮಾಡುವೆನು.
Kannada BSI Bible 2016
ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು, ತಗ್ಗುಗಳ ಮಧ್ಯದಲ್ಲಿ ಬುಗ್ಗೆ ಗಳನ್ನು ಹೊರಡಿಸಿ ಅರಣ್ಯವನ್ನು ನೀರಿನ ಕೆರೆಯ ನ್ನಾಗಿಯೂ ಒಣನೆಲವನ್ನು ನೀರಿನ ಒರತೆಗಳನ್ನಾ ಗಿಯೂ ಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೋಳುಗುಡ್ಡಗಳಲ್ಲಿ ನದಿಗಳನ್ನು, ತಗ್ಗುಗಳಲ್ಲಿ ಒರತೆಗಳನ್ನು ಹೊರಡಿಸಿ ಅರಣ್ಯವನ್ನು ಕೆರೆಯಾಗಿಯೂ ಮರುಭೂವಿುಯನ್ನು ಬುಗ್ಗೆಗಳಾಗಿಯೂ ಮಾಡುವೆನು.
Kannada Bible (KNCL) BSI 2016
ಹೊರಡಿಸುವೆನು ಬೋಳುಗುಡ್ಡಗಳಲ್ಲಿ ನದಿಗಳನು ತಗ್ಗುತಿಟ್ಟುಗಳಲ್ಲಿ ಒರತೆಗಳನು ಮಾರ್ಪಡಿಸುವೆನು ಕೆರೆಯಾಗಿ ಅರಣ್ಯವನು ಬುಗ್ಗೆಗಳಾಗಿ ಮರುಭೂಮಿಯನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು ತಗ್ಗುಗಳ ಮಧ್ಯದಲ್ಲಿ ಬುಗ್ಗೆಗಳನ್ನು ಹೊರಡಿಸಿ, ಮರುಭೂಮಿಯನ್ನು ನೀರಿನ ಕೆರೆಯನ್ನಾಗಿಯೂ, ಒಣನೆಲವನ್ನು ನೀರಿನ ಒರತೆಗಳನ್ನಾಗಿಯೂ ಮಾಡುವೆನು.