Isaiah 41:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮರುಭೂಮಿಯ ಮೇಲೆ ಮರಗಳು ಬೆಳೆಯುವವು. ಅಲ್ಲಿ ದೇವದಾರು, ಆಲೀವ್, ಕಸ್ತೂರಿಜಾಲಿ, ತುರಾಯಿ, ತಪಸಿ ಮತ್ತು ತಿಲಕ ವೃಕ್ಷಗಳು ಇರುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮರುಭೂಮಿಯಲ್ಲಿ ದೇವದಾರು, ಜಾಲಿಮರ, ಸುಗಂಧ ಒಲೀವ್ ಮರಗಳನ್ನು ನಾನು ನೆಡುವೆನು. ಮರುಭೂಮಿಯಲ್ಲಿ ತುರಾಯಿ, ತಪಸಿ, ತಿಲಕ ವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು.
Kannada BSI Bible 2016
ಅರಣ್ಯದಲ್ಲಿ ದೇವದಾರು, ಜಾಲಿಮರ, ಸುಗಂಧ, ಒಲೀವ ಮರಗಳನ್ನು ನಾನು ನೆಡುವೆನು, ಮರುಭೂಮಿಯಲ್ಲಿ ತುರಾಯಿ, ತಪಸಿಟ್ಟಿ, ತಿಲಕವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವದಾರು ಕಸ್ತೂರಿಜಾಲಿ ಸುಗಂಧ ಒಲೀವ ಮರಗಳನ್ನು ಅಡವಿಯಲ್ಲಿ ನೆಡುವೆನು, ತುರಾಯಿ ತಪಸಿ ತಿಲಕ ವೃಕ್ಷಗಳನ್ನು ಅರಣ್ಯದಲ್ಲಿ ತೋಪಾಗಿ ಬೆಳೆಯಿಸುವೆನು;
Kannada Bible (KNCL) BSI 2016
ನೆಡುವೆನು ಅಡವಿಯಲ್ಲಿ ದೇವದಾರು ಕಸ್ತೂರಿ, ಜಾಲಿ, ಸುಗಂಧ ಓಲೀವ್ ಮರಗಳನು; ತೋಪಾಗಿ ಬೆಳೆಸುವೆನು ಅರಣ್ಯದೊಳು ತುರಾಯಿ, ತಪಸಿ, ತಿಲಕ ವೃಕ್ಷಗಳನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರುಭೂಮಿಯಲ್ಲಿ ದೇವದಾರು, ಜಾಲೀಮರ, ಸುಗಂಧ, ಓಲಿವ್ ಮರಗಳನ್ನು ನಾನು ನೆಡುವೆನು. ಮರುಭೂಮಿಯಲ್ಲಿ ತುರಾಯಿ, ತಪಸಿ, ತಿಲಕ ವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು.