Isaiah 41:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಇವುಗಳನ್ನು ನೋಡಿ, ಇವು ಯೆಹೋವನ ಶಕ್ತಿಯಿಂದ ಆದವು ಎಂದು ತಿಳಿದುಕೊಳ್ಳುವರು. ಜನರು ಈ ಸಂಗತಿಗಳನ್ನು ನೋಡಿ ಇಸ್ರೇಲರ ಪರಿಶುದ್ಧನಾದ ಯೆಹೋವನೇ ಇವುಗಳನ್ನು ಮಾಡಿದನೆಂದು ತಿಳಿದುಕೊಳ್ಳುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನ ಹಸ್ತವು ಇದನ್ನು ಮಾಡಿದೆ, ಹೌದು, ಇಸ್ರಾಯೇಲಿನ ಸದಮಲಸ್ವಾಮಿಯೇ ಸೃಷ್ಟಿಸಿದ್ದಾನೆ” ಎಂದು ಎಲ್ಲರೂ ಕಂಡು ತಿಳಿದು ಮನಸ್ಸಿಗೆ ತಂದು ಗ್ರಹಿಸಿಕೊಳ್ಳುವರು.
Kannada BSI Bible 2016
ಆಗ ಕರ್ತನ ಹಸ್ತವು ಇದನ್ನು ಮಾಡಿದೆ ಎಂದೂ ಇಸ್ರಾ ಯೇಲಿನ ಪರಿಶುದ್ಧನು ಇದನ್ನು ಸೃಷ್ಟಿಸಿದನು ಎಂದೂ ಅವರು ನೋಡಿ, ತಿಳಿದು ಮನಸ್ಸಿಗೆ ತಂದು ಗ್ರಹಿಸಿ ಕೊಳ್ಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನ ಹಸ್ತವು ಇದನ್ನು ಮಾಡಿದೆ, ಹೌದು, ಇಸ್ರಾಯೇಲಿನ ಸದಮಲ ಸ್ವಾವಿುಯೇ ಸೃಷ್ಟಿಸಿದ್ದಾನೆ ಎಂದು ಎಲ್ಲರೂ ಕಂಡು ತಿಳಿದು ಮನಮುಟ್ಟಿ ಗ್ರಹಿಸಿಕೊಳ್ಳುವರು.
Kannada Bible (KNCL) BSI 2016
ಇದನು ಕಂಡರಿತು ಗ್ರಹಿಸಿಕೊಳ್ಳುವರು ಜನರು ಮನಸಾರೆ, ನುಡಿವರಾಗ, ‘ಇದನ್ನು ಮಾಡಿದ ಹಸ್ತವು ಸರ್ವೇಶ್ವರ ಸ್ವಾಮಿಯದೇ, ಇದನ್ನು ಸೃಷ್ಟಿಸಿದಾತ ಇಸ್ರಯೇಲಿನ ಪರಮಪಾವನ ಸ್ವಾಮಿಯೇ.’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರ ಹಸ್ತವು ಇದನ್ನು ಮಾಡಿದೆ ಎಂದೂ, ಇಸ್ರಾಯೇಲಿನ ಪರಿಶುದ್ಧನು ಇದನ್ನು ಸೃಷ್ಟಿಸಿದನು ಎಂದೂ ಅವರು ಕಂಡು ತಿಳಿದು, ಮನಸ್ಸಿಗೆ ಗ್ರಹಿಸಿಕೊಳ್ಳುವರು.