Isaiah 41:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮುಂದೆ ಸಂಭವಿಸುವುದನ್ನು ತಿಳಿದುಕೊಳ್ಳಲು ನಾವು ಯಾವ ಸೂಚನೆಗಳಿಗಾಗಿ ಎದುರು ನೋಡಬೇಕು? ತಿಳಿಸಿರಿ. ನೀವೇ ದೇವರುಗಳೆಂದು ಆಗ ನಮಗೆ ಖಚಿತವಾಗುವುದು. ಏನನ್ನಾದರೂ ಮಾಡಿರಿ. ಯಾವದನ್ನಾದರೂ ಮಾಡಿರಿ. ಒಳ್ಳೆಯದನ್ನು, ಕೆಟ್ಟದ್ದನ್ನು ಮಾಡಿರಿ. ಆಗ ನೀವು ಜೀವವುಳ್ಳವರೆಂದು ತಿಳಿದು ನಿಮಗೆ ಗೌರವಿಸಿ, ಭಯಪಟ್ಟು ನಿಮ್ಮನ್ನು ಹಿಂಬಾಲಿಸುವೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ದೇವರುಗಳೆಂದು ನಮಗೆ ಅರಿವು ಹುಟ್ಟುವಂತೆ ಮುಂದೆ ಆಗುವವುಗಳನ್ನು ತಿಳಿಸಿರಿ. ನಾವು ಒಟ್ಟಿಗೆ ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡಿರಿ.
Kannada BSI Bible 2016
ನೀವು ದೇವರುಗಳೆಂದು ತಿಳಿದುಕೊಳ್ಳುವಂತೆ ಮುಂದೆ ಬರುವವುಗಳನ್ನು ನಮಗೆ ತಿಳಿಸಿರಿ; ಹೌದು, ನಾವು ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದ ನ್ನಾಗಲಿ ಕೆಟ್ಟದ್ದನ್ನಾಗಲಿಮಾಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ದೇವರುಗಳೆಂದು ನಮಗೆ ಅರಿವು ಹುಟ್ಟುವಂತೆ ಮುಂದಾಗತಕ್ಕವುಗಳನ್ನು ತಿಳಿಸಿರಿ; ನಾವು ಒಟ್ಟಿಗೆ ಕಕ್ಕಾಬಿಕ್ಕಿಯಾಗಿ ನೋಡುವಂತೆ ಮೇಲಾಗಲಿ ಕೇಡಾಗಲಿ ಏನಾದರೂ ಮಾಡಿರಿ.
Kannada Bible (KNCL) BSI 2016
ತಿಳಿಸಿ ನಮಗೆ ಮುಂದೆ ನಡೆಯಬೇಕಾದವುಗಳನು ನಂಬುವೆವು ಆಗ ನೀವು ದೇವರುಗಳೆಂಬುದನು, ಪ್ರದರ್ಶಿಸಿ ಒಳಿತನ್ನಾಗಲಿ ಕೆಡುಕನ್ನಾಗಲಿ ಆಗ ನೋಡುವೆವು ಒಟ್ಟಿಗೆ ನಿಬ್ಬೆರಗಾಗಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ದೇವರುಗಳೆಂದು ತಿಳಿದುಕೊಳ್ಳುವಂತೆ ಮುಂದೆ ಬರುವವುಗಳನ್ನು ನಮಗೆ ತಿಳಿಸಿರಿ. ಹೌದು, ನಾವು ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡಿರಿ.