Isaiah 41:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಆ ಸುಳ್ಳುದೇವರುಗಳನ್ನು ದೃಷ್ಟಿಸಿ ನೋಡಿದೆನು. ಅವುಗಳಲ್ಲಿ ಯಾವುದೂ ಮಾತಾಡುವಷ್ಟು ಜ್ಞಾನಿಯಾಗಿರಲಿಲ್ಲ. ನಾನು ಅವುಗಳನ್ನು ಪ್ರಶ್ನಿಸಿದೆನು. ಆದರೆ ಅವು ಉತ್ತರಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನೋಡಿದಾಗ ಇವರಲ್ಲಿ ಸಮರ್ಥರು ಯಾರೂ ಇಲ್ಲ. ನಾನು ಪ್ರಶ್ನೆ ಮಾಡಿದರೆ ಒಂದು ಮಾತನ್ನಾದರೂ ಹೇಳಬಲ್ಲ ಆಲೋಚಕನು ಇಲ್ಲವೇ ಇಲ್ಲ.
Kannada BSI Bible 2016
ನಾನು ನೋಡಿದಾಗ ಅಲ್ಲಿ ಯಾರೂ ಇಲ್ಲ; ನಾನು ಅವರನ್ನು ಕೇಳುವ ಪ್ರಶ್ನೆಗೆ ಅವರಲ್ಲಿ ಒಂದು ಮಾತನ್ನು ಉತ್ತರಿಸುವ ಸಲಹೆಗಾರನು ಇಲ್ಲವೇ ಇಲ್ಲ.ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನೋಡಲು ಇವರಲ್ಲಿ ಸಮರ್ಥರು ಯಾರೂ ಇಲ್ಲ; ನಾನು ಪ್ರಶ್ನೆಮಾಡಿದರೆ ಒಂದು ಮಾತನ್ನಾದರೂ ಹೇಳಬಲ್ಲ ಆಲೋಚಕನು ಇಲ್ಲವೇ ಇಲ್ಲ.
Kannada Bible (KNCL) BSI 2016
ನಾ ನೋಡಲು ಅವರಲ್ಲಿ ಸಮರ್ಥರಾರು ಇಲ್ಲ ನಾ ಪ್ರಶ್ನಿಸಲು ಉತ್ತರಿಸಬಲ್ಲ ವಿವೇಕಿ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನೋಡಿದಾಗ, ಅಲ್ಲಿ ಯಾರೂ ಇಲ್ಲ. ನಾನು ಅವರನ್ನು ಕೇಳುವ ಪ್ರಶ್ನೆಗೆ, ಅವರಲ್ಲಿ ಒಂದು ಮಾತನ್ನು ಉತ್ತರಿಸುವ ಸಲಹೆಗಾರನು ಇಲ್ಲವೇ ಇಲ್ಲ.