Isaiah 41:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇವೆಲ್ಲಾ ನೆರವೇರುವಂತೆ ಮಾಡಿದವರು ಯಾರು? ಆದಿಯಿಂದ ಎಲ್ಲಾ ಜನರನ್ನು ಕರೆದವರು ಯಾರು? ಯೆಹೋವನೆಂಬ ನಾನೇ ಇವೆಲ್ಲವನ್ನು ಮಾಡಿದೆನು. ನಾನೇ ಮೊದಲನೆಯವನಾಗಿದ್ದೇನೆ. ಅನಾದಿಕಾಲಕ್ಕಿಂತ ಮೊದಲು ನಾನಿದ್ದೆನು. ಎಲ್ಲವೂ ಅಂತ್ಯವಾಗುವ ತನಕ ನಾನು ಇರುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದನ್ನೆಲ್ಲಾ ನಡೆಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವನಾದ ಯೆಹೋವನೆಂಬ ನಾನೇ; ಹೌದು, ಆದಿಪುರುಷನೂ, ಅಂತ್ಯಕಾಲದವರ ಸಂಗಡಿಗನೂ ಆಗಿರುವ ನಾನೊಬ್ಬನೇ.
Kannada BSI Bible 2016
ಇದನ್ನೆಲ್ಲಾ ನಡೆಯಿಸಿ ನೆರವೇರಿ ಸಿದವನು ಆದಿಯಿಂದ ತಲತಲಾಂತರಗಳನ್ನು ಬರ ಮಾಡಿದವನು ಯಾರು? ಕರ್ತನಾಗಿರುವ ನಾನೇ ಮೊದಲನೆಯವನು ಅಂತ್ಯಕಾಲದಲ್ಲಿ ಸಂಗಡಿಗನು ಆಗಿರುವಾತನೇ ನಾನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದನ್ನೆಲ್ಲಾ ನಡೆಯಿಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವನಾದ ಯೆಹೋವನೆಂಬ ನಾನೇ; ಹೌದು, ಆದಿಪುರುಷನೂ ಅಂತ್ಯಕಾಲದವರ ಸಂಗಡಿಗನೂ ಆಗಿರುವ ನಾನೊಬ್ಬನೇ.
Kannada Bible (KNCL) BSI 2016
ಇದನ್ನೆಲ್ಲಾ ನಡೆಯಿಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವರು ಯಾರು? ಸರ್ವೇಶ್ವರನಾದ ನಾನೇ. ಹೌದು, ಆದಿಯಲ್ಲಿದ್ದವನು. ಅಂತ್ಯದಲ್ಲಿ ಇರುವವನು ಆದ ನಾನೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದನ್ನೆಲ್ಲಾ ನಡೆಯಿಸಿ ನೆರವೇರಿಸಿದವನೂ ಆದಿಯಿಂದ ತಲತಲಾಂತರಗಳನ್ನು ಬರಮಾಡಿದವನು ಯಾರು? ಯೆಹೋವ ಎಂಬ ನಾನೇ ಮೊದಲನೆಯವನು, ಅಂತ್ಯಕಾಲದಲ್ಲಿ ಸಂಗಡಿಗನು ಆಗಿರುವಾತನೇ ನಾನು.