Isaiah 41:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ದೂರದೇಶದಲ್ಲಿದ್ದೆ. ಆದರೆ ಕೈಚಾಚಿ ಆ ದೇಶದಿಂದ ನಿನ್ನನ್ನು ಕರೆದೆನು. ‘ನೀನು ನನ್ನ ಸೇವಕ’ ಎಂದು ಹೇಳಿದೆನು. ನಾನು ನಿನ್ನನ್ನು ಆರಿಸಿಕೊಂಡೆನು. ಆದರೆ ನಿನ್ನನ್ನು ತಳ್ಳಿಬಿಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಭೂಮಿಯ ಕಟ್ಟಕಡೆಯಲ್ಲಿ ಹಿಡಿದು ದಿಗಂತಗಳಿಂದ ಕರೆದ ಜನವೇ, “ನೀನು ನನ್ನ ಸೇವಕನು, ನಾನು ನಿನ್ನನ್ನು ಆರಿಸಿಕೊಂಡೆನು, ತಳ್ಳಲಿಲ್ಲ” ಎಂದು ನಾನು ಹೇಳಿ ಸಂಬೋಧಿಸಿದ ಪ್ರಜೆಯೇ,
Kannada BSI Bible 2016
ನಿನ್ನನ್ನು ಕಟ್ಟಕಡೆಗಳಿಂದ ಆರಿಸಿಕೊಂಡು, ಅದರ ಕೊನೆಯಿಂದ ಕರೆದು--ನೀನು ನನ್ನ ಸೇವಕನು, ನಿನ್ನನ್ನು ನಾನು ಆದುಕೊಂಡಿದ್ದೇನೆ. ನಿನ್ನನ್ನು ತಳ್ಳಿಬಿಡುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಭೂವಿುಯ ಕಟ್ಟಕಡೆಯಲ್ಲಿ ಹಿಡಿದು ದಿಗಂತಗಳಿಂದ ಕರೆದ ಜನವೇ, ನೀನು ನನ್ನ ಸೇವಕನು, ನಾನು ನಿನ್ನನ್ನು ಆರಿಸಿಕೊಂಡೆನು, ತಳ್ಳಲಿಲ್ಲ ಎಂದು ನಾನು ಹೇಳಿ ಸಂಬೋಧಿಸಿದ ಪ್ರಜೆಯೇ, ನೀನಂತು ಹೆದರಬೇಡ,
Kannada Bible (KNCL) BSI 2016
ಬರಮಾಡಿದೆ ನಾನು ನಿನ್ನನ್ನು ಭೂಮಿಯ ಕಟ್ಟಕಡೆಯಿಂದ ಕರೆದುತಂದೆ ನಿನ್ನನ್ನು ದಿಗಂತದಿಂದ. ನಿನಗೆ ನಾನು ಇಂತೆಂದೆ: ನೀನೆನ್ನ ದಾಸ, ನಿನ್ನ ನಾ ತಿರಸ್ಕರಿಸದೆ ಆರಿಸಿಕೊಂಡೆ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನನ್ನು ಭೂಮಿಯ ಕಟ್ಟಕಡೆಗಳಿಂದ ಆರಿಸಿಕೊಂಡು, ಅದರ ದೂರದ ಕೊನೆಯಿಂದ ಕರೆದು, ‘ನೀನು ನನ್ನ ಸೇವಕನು,’ ನಿನ್ನನ್ನು ನಾನು ಆಯ್ದುಕೊಂಡಿದ್ದೇನೆ. ನಿನ್ನನ್ನು ತಳ್ಳಿಬಿಡುವುದಿಲ್ಲ.