Isaiah 42:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನನ್ನ ಸೇವಕನನ್ನು ನೋಡಿರಿ! ನಾನು ಆತನಿಗೆ ಬೆಂಬಲ ನೀಡುತ್ತೇನೆ. ನಾನು ಆರಿಸಿಕೊಂಡಿದ್ದು ಆತನನ್ನೇ. ನಾನು ಆತನನ್ನು ಮೆಚ್ಚಿಕೊಂಡಿದ್ದೇನೆ. ನನ್ನ ಆತ್ಮವನ್ನು ಆತನಲ್ಲಿರಿಸುವೆನು. ಆತನು ಜನಾಂಗಗಳನ್ನು ನ್ಯಾಯವಾಗಿ ತೀರ್ಪು ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.
Kannada BSI Bible 2016
ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ; ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ; ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರ ಪಡಿಸುವನು.
Kannada Bible (KNCL) BSI 2016
ಇಗೋ, ನನ್ನ ದಾಸನು! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಗೋ, ನನ್ನ ಸೇವಕನು. ಇವನಿಗೆ ನಾನೇ ಆಧಾರ, ನಾನು ಆಯ್ದುಕೊಂಡವನಲ್ಲಿ ನನ್ನ ಆತ್ಮವು ಆನಂದಿಸುವುದು; ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಇತರ ಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.