Isaiah 42:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮರುಭೂಮಿಗಳೂ ನಗರಗಳೂ ಕೇದಾರಿನ ಹಳ್ಳಿಗಳೂ ಯೆಹೋವನನ್ನು ಸ್ತುತಿಸಲಿ. ಸೆಲಾ ಪಟ್ಟಣವಾಸಿಗಳೇ, ಹರ್ಷದಿಂದ ಹಾಡಿರಿ. ನಿಮ್ಮ ಪರ್ವತಗಳ ತುದಿಯಿಂದ ಗಾನ ಮಾಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಣ್ಯವೂ, ಅಲ್ಲಿನ ಊರುಗಳೂ, ಕೇದಾರಿನವರು ವಾಸಿಸುವ ಗ್ರಾಮಗಳೂ ಆರ್ಭಟಿಸಲಿ, ಸೆಲ ಪಟ್ಟಣದವರು ಹರ್ಷಧ್ವನಿಗೈದು ಪರ್ವತಾಗ್ರಗಳಲ್ಲಿ ಜಯಘೋಷ ಮಾಡಿರಿ.
Kannada BSI Bible 2016
ಅರಣ್ಯವು ಅದರ ಪಟ್ಟಣಗಳು ಸ್ವರವೆತ್ತಲಿ; ಕೇದಾರ್ ಊರಿನ ನಿವಾಸಿಗಳು, ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ; ಅವರು ಪರ್ವತದ ತುದಿಯಲ್ಲಿ ಕೂಗಲಿ,
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಣ್ಯವೂ ಅಲ್ಲಿನ ಊರುಗಳೂ ಕೇದಾರಿನವರ ಗ್ರಾಮಗಳೂ ಆರ್ಭಟಿಸಲಿ, ಸೆಲಪಟ್ಟಣದವರು ಹರ್ಷಧ್ವನಿಗೈದು ಪರ್ವತಾಗ್ರಗಳಲ್ಲಿ ಕೇಕೆ ಹಾಕಲಿ.
Kannada Bible (KNCL) BSI 2016
ಘೋಷಿಸಲಿ ಮರುಭೂಮಿಯೂ ಅದರ ನಗರಗಳೂ ಕೇದಾರಿನವರೂ ಗ್ರಾಮನಿವಾಸಿಗಳೂ ಜಯಘೋಷಮಾಡಲಿ ಸೆಲ ಪಟ್ಟಣದವರೂ ಸಂತೋಷದಿಂದ ಹರ್ಷಧ್ವನಿಗೈಯಲಿ ಆ ಪರ್ವತದ ತುತ್ತತುದಿಗಳಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರುಭೂಮಿಯು, ಅದರ ಪಟ್ಟಣಗಳು ಘೋಷಿಸಲಿ. ಕೇದಾರ್ ಊರಿನ ನಿವಾಸಿಗಳು ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ. ಸೆಲ ಪಟ್ಟಣದವರೂ ಹರ್ಷಧ್ವನಿಗೈಯಲಿ; ಅವರು ಪರ್ವತದ ತುದಿಯಲ್ಲಿ ಆರ್ಭಟಿಸಲಿ.